ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಗ್ರಾಮಾಭಿವೃದ್ಧಿ ಮೊಗ್ರು ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಮೊಗ್ರು ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

 
 

 

ಕಣಿಯೂರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊಗ್ರು ಒಕ್ಕೂಟ ವತಿಯಿಂದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಅಂಗವಾಗಿ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತಾನಾಜೆ ಇಲ್ಲಿ ಸ್ವಚ್ಛತಾ ಕಾರ್ಯವನ್ನು ಅಗಸ್ಟ್ 24 ರಂದು ನಡೆಸಲಾಯಿತು. ಭಜನಾ ಮಂದಿರದ ಸುತ್ತಲೂ ಬೆಳೆದಿದ್ದ ಕಳೆ ಗಿಡಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಈ ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷರು , ಭಜನಾಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮ, ಶೌರ್ಯ ವಿಪತ್ತು ನಿರ್ವಹಣ ಘಟಕದ ಸ್ವಯಂ ಸೇವಕರಾದ ವಿನಯಚಂದ್ರ ಮೊಗ್ರು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಮೊಗ್ರು ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!