ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪದ್ಮುಂಜ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ಪದ್ಮುಂಜ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

 

 

 

 

ಬೆಳ್ತಂಗಡಿ: ತುಂಡಾಗಿ ‌ಬಿದ್ದ ವಿದ್ಯುತ್ ತಂತಿಯನ್ನು ತುಳಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಪದ್ಮುಂಜ ಸಮೀಪ ನಡೆದಿದೆ.

ಮೃತರನ್ನು ‌ಪೊಯ್ಯೆ ಸಮೀಪದ ನಿವಾಸಿ ಕೂಲಿ ಕಾರ್ಮಿಕ ನಾಣ್ಯಪ್ಪ ಪೂಜಾರಿ (55) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಬೆಳಗ್ಗೆ 6.30 ಕ್ಕೆ ಉಪ್ಪಿನಂಗಡಿಯಲ್ಲಿನ ಕೋಳಿ ಅಂಗಡಿಗೆ ಕೆಲಸಕ್ಕೆಂದು ತೆರಳುವ ಸಂದರ್ಭ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ಅವರ ಕಾಲಿಗೆ ತಗುಲಿ ಘಟನೆ ನಡೆದಿದೆ. ಸ್ಥಳೀಯರು ಇದನ್ನು ಗಮನಿಸಿ ಮನೆಯವರಿಗೆ ವಿಷಯ ತಿಳಿಸಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರ ಸೇರಿ ಕುಟುಂಬಸ್ಥರನ್ನು ಅಗಲಿದ್ದಾರೆ.ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!