ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕರ್ತವ್ಯನಿರತ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಹೃದಯಾಘಾತದಿಂದ ಸಾವು.

ಕರ್ತವ್ಯನಿರತ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಹೃದಯಾಘಾತದಿಂದ ಸಾವು.

 

 

 

 

ಬೆಳ್ತಂಗಡಿ: ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಸಿ. (56.ವ) ಅವರು ತನ್ನ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮಧ್ಯಾಹ್ನ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಸಮೀಪದಲ್ಲಿ ಇರುವ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆಗೊಳಪಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ .

ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನ ನಿಲಯದ ಧರ್ಮೋಪದೇಶ ಕೇಂದ್ರದಲ್ಲಿ ಸುಮಾರು 10 ವರ್ಷಗಳ ಕಾಲ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದ ಜೋಸೆಫ್ ಅವರು, ಬಳಿಕ ಸಿರಿಯನ್ ಕೆಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ 11 ವರ್ಷಗಳಿಂದ ಕರ್ತವ್ಯನಿರ್ವಹಿಸುತಿದ್ದರು .ಮೃತರು ಪತ್ನಿ ಸಿಂಧೂ ಜೋಸೆಫ್, ಪುತ್ರರಾದ ಜೋನ್ಸನ್ ಪಿ.ಜೆ, ರೋಷನ್ ಪಿ.ಜೆ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!