ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ವೀರೇಂದ್ರ ಹೆಗ್ಗಡೆ.

ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ವೀರೇಂದ್ರ ಹೆಗ್ಗಡೆ.

 

 

 

 

 

 

ಬೆಳ್ತಂಗಡಿ: ಖ್ಯಾತ ಚಲನ ಚಿತ್ರ ನಟ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ. ಖ್ಯಾತ ಚಲನಚಿತ್ರನಟ ಪುನೀತ್‍ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು. ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತು ಗೌರವಕ್ಕೆ ಪಾತ್ರರಾಗಿದ್ದರು.

 

 

ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ. ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ.ಎಂದು ಸಂತಾಪ ಸೂಚಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!