ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತುಳು ಪರ ಹೋರಾಟಕ್ಕೆ ಅಡ್ಡಿ ಅಧಿಕಾರಿಗಳ ವರ್ತನೆಗೆ ತುಳುನಾಡ್ ಒಕ್ಕೂಟ ಖಂಡನೆ.

ತುಳು ಪರ ಹೋರಾಟಕ್ಕೆ ಅಡ್ಡಿ ಅಧಿಕಾರಿಗಳ ವರ್ತನೆಗೆ ತುಳುನಾಡ್ ಒಕ್ಕೂಟ ಖಂಡನೆ.

 

 

ಬೆಳ್ತಂಗಡಿ:ಸಾವಿರಾರು ವರ್ಷಗಳ ಇತಿಹಾಸವುಳ್ಳ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆ ಎಂದು ಘೋಷಿಸಬೇಕೆಂದು ಸರಕಾರವನ್ನು ಒತ್ತಾಯಿಸುವ ನಿಟ್ಟಿನಲ್ಲಿ ಅಕ್ಟೋಬರ್ 05 ಮಂಗಳವಾರ ದ.ಕ ಜಿಲ್ಲಾಧಿಕಾರಿ ಕಛೇರಿಯ ಎದುರು ಸಭೆ ಸೇರಿ ಸರಕಾರಕ್ಕೆ ಮನವಿ ನೀಡುವ ಬಗ್ಗೆ ತುಳುನಾಡ್ ಒಕ್ಕೂಟ ಬೆಳ್ತಂಗಡಿ ಮತ್ತು ಇತರೆ ತುಳು ಪರ ಸಂಘಟನೆಗಳು ತೀರ್ಮಾನಿಸಿದ್ದವು.ಆದರೆ ಕೊವಿಡ್ ನಿಯಮಾವಳಿಯ ಕುಂಟು ನೆಪ ಹೇಳಿ ಅಧಿಕಾರಿಗಳು ಸಭೆ ನಡೆಸದಂತೆ ತುಳು ಪರ ಹೋರಾಟಕ್ಕೆ ಅಡ್ಡಿ ಪಡಿಸಿರುತ್ತಾರೆ .ತುಳು ನಾಡಿನ ಜನರ ಮತ ಪಡೆದು ಚುನಾಯಿತರಾದ ಜನ ಪ್ರತಿನಿಧಿಗಳು ಕೂಡ ತುಳು ಪರವಾದ ಧ್ವನಿ ಎತ್ತದೆ ಇರುವುದು ವಿಪರ್ಯಾಸವೆ ಸರಿ. ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಕೈ ಹಾಕಿರುವ ಅಧಿಕಾರಿಗಳ ವರ್ತನೆಯನ್ನು ತುಳುನಾಡ್ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.ಮತ್ತು ತುಳು ರಾಜ್ಯದ ಅಧಿಕೃತ ಭಾಷೆಯಾಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬೆಳ್ತಂಗಡಿ ತಾಲೂಕು ತುಳುನಾಡ್ ಒಕ್ಕೂಟ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!