ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಾಂಶುಪಾಲರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಳೆ ವಿದ್ಯಾರ್ಥಿಗಳಿಂದ ಠಾಣೆಗೆ ದೂರು

ಪ್ರಾಂಶುಪಾಲರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಳೆ ವಿದ್ಯಾರ್ಥಿಗಳಿಂದ ಠಾಣೆಗೆ ದೂರು

 

ಬೆಳ್ತಂಗಡಿ: ಹಳೆಕೋಟೆ ಬಳಿಯ ಖಾಸಗಿ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿದಾಡಿದ್ದು, ಆರೋಪಿಗಳ ಪತ್ತೆ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಾಲೇಜಿನ ಹಳೆ ವಿದ್ಯಾರ್ಥಿಗಳು ದೂರು ದಾಖಲಿಸಿದ್ದು, ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆರೋಪಿಗಳು ಪ್ರಾಂಶುಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ್ದಲ್ಲದೆ ಕಾಲೇಜಿನ ಕುರಿತು ಮತೀಯ ಸಂದೇಶ ಹಾಕುವ ಮೂಲಕ ಕೋಮು ಸೌಹಾರ್ದ ಕದಡುವ ಪ್ರಯತ್ನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ದೂರಿನೊಂದಿಗೆ ವೈರಲ್ ಆದ ಸಂದೇಶದ ಪ್ರತಿಯನ್ನೂ ಹಳೆವಿದ್ಯಾರ್ಥಿಗಳು ನೀಡಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!