ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಇಬ್ಬರು ಯುವಕರ ಮೇಲೆ‌ ಮಾರಣಾಂತಿಕ‌ ಹಲ್ಲೆ, ಕೊಲೆಯತ್ನ ಶಂಕೆ: ಬೆಳ್ತಂಗಡಿ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ಆರೋಪಿಗಳು ವಶಕ್ಕೆ

ಇಬ್ಬರು ಯುವಕರ ಮೇಲೆ‌ ಮಾರಣಾಂತಿಕ‌ ಹಲ್ಲೆ, ಕೊಲೆಯತ್ನ ಶಂಕೆ: ಬೆಳ್ತಂಗಡಿ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ಆರೋಪಿಗಳು ವಶಕ್ಕೆ

 

ಬೆಳ್ತಂಗಡಿ: ಇಬ್ಬರು ‌ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಗಳವಾರ ತಡ ರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಳಿಯ ಗ್ರಾಮ ಗೋವಿಂದೂರು ಬಳಿ ನಡೆದಿದೆ. ರಿಕ್ಷಾ ಚಾಲಕ ಹಾಗೂ‌ ಸಹಸವಾರರಿಗೆ ಸ್ಥಳೀಯ ವ್ಯಕ್ತಿಗಳು ಕಣ್ಣಿಗೆ ‌ಖಾರದ ಪುಡಿ ಎರಚಿ ಮಾರಾಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿರುವ ಕುರಿತು ‌ಮಾಹಿತಿ‌ ಲಭಿಸಿದೆ. ಗಾಯಗೊಂಡವರನ್ನು ಕೂಡಲೇ ಮಂಗಳೂರಿನ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬನ‌‌ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪೊಲೀಸರ ಮಿಂಚಿನ ಕಾರ್ಯಾಚರಣೆ: ಘಟನೆ ಮಾಹಿತಿ ಅರಿತ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕೆಲ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು, ಸಿನಿಮೀಯ ಮಾದರಿಯಲ್ಲಿ ಪೊಲೀಸರು ದಾಳಿ ನಡೆಸಿ ಕೆಲವೇ ಗಂಟೆಗಳಲ್ಲಿ ಆರೋಪಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸ್ಪಷ್ಟ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!