ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು ಭಾರೀ ಶಬ್ದದೊಂದಿಗೆ ಭೂ ಕಂಪನ: ಬೆಚ್ಚಿ ಬಿದ್ದ ಜನತೆ..!

ಬೆಂಗಳೂರು ಭಾರೀ ಶಬ್ದದೊಂದಿಗೆ ಭೂ ಕಂಪನ: ಬೆಚ್ಚಿ ಬಿದ್ದ ಜನತೆ..!

 

 

ಬೆಂಗಳೂರು: ಭಾರೀ ಶಬ್ದದೊಂದಿಗೆ ಭೂ ಕಂಪಿಸಿದ ಘಟನೆಯು ರಾಜಧಾನಿ ಬೆಂಗಳೂರು ಸುತ್ತಮುತ್ತ ನಡೆದಿದೆ.ನಗರದಲ್ಲಿ ಇಂದು ಸ್ಫೋಟದ ಸದ್ದಿನೊಂದಿಗೆ ಭೂಕಂಪನದ ಅನುಭವವಾಗಿದೆ. ಬೆಳಗ್ಗೆ ಸುಮಾರು 11.30ರಿಂದ 12-15ರ ಸಮಯದಲ್ಲಿ ಶಬ್ದ ಕೇಳಿಬಂದಿದ್ದು, ಜನರು ಭಯಭೀತರಾಗಿದ್ದರು.

ಭಾರಿ ಶಬ್ದದಿಂದ ನಗರದ ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ಆರ್.ಆರ್. ನಗರ, ಕಗ್ಗಲಿಪುರದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿತ್ತು.ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸ್ಥಳೀಯವಾಗಿ ಭೂಕಂಪನದ ಯಾವುದೇ ಮಾಹಿತಿ ದಾಖಲಾಗಿಲ್ಲ. ಭೂಕಂಪ ಮಾಪನ ಸಿಸ್ಮೋಗ್ರಾಫ್​​ನಲ್ಲಿ ಭೂಕಂಪನವಾದ ಮಾಹಿತಿ ಇಲ್ಲದಿರುವುದರಿಂದ ಭೂಕಂಪನ ಆಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!