ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ ಉಪ್ಪಿನಂಗಡಿಯ ಯುವಕರಿಬ್ಬರು ದಾರುಣ ಸಾವು ಇನ್ನಿಬ್ಬರಿಗೆ ಗಾಯ.

ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ ಉಪ್ಪಿನಂಗಡಿಯ ಯುವಕರಿಬ್ಬರು ದಾರುಣ ಸಾವು ಇನ್ನಿಬ್ಬರಿಗೆ ಗಾಯ.

 

 

 

ಬಂಟ್ವಾಳ : ಬ್ರಹ್ಮರಕೂಟ್ಲು ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ಕ್ಯಾಟರಿಂಗ್ ನ ಪಿಕಪ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶಿತ್ (21) ಎಂಬುವರು ಮೃತ ದುರ್ದೈವಿಗಳು. ಸಿಂಚನ್ ಮತ್ತು ಸುದೀಪ್ ಎಂಬ ಇಬ್ಬರು ಯುವಕರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕ್ಯಾಟರಿಂಗ್ ಕೆಲಸವನ್ನು ಮುಗಿಸಿ ಮರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯ ತುಂಬೆ ರಾಮಲಕಟ್ಟೆಯ ಬಳಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ತಕ್ಷಣ ಗಾಯಾಳುಗಳನ್ನು ಸಮೀಪದ ತುಂಬೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಇಬ್ಬರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!