ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಳದಂಗಡಿ ಸತ್ಯದೇವತೆ ದೈವಸ್ಥಾನಕ್ಕೆ ರಾಜ್ಯಪಾಲರ ಭೇಟಿ ದೈವದ ಪ್ರಸಾದ ಸ್ವೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಳದಂಗಡಿ ಅರಮನೆಯ ಪದ್ಮಪ್ರಸಾದ್ ಅಜಿಲ ರಾಜ್ಯಪಾಲರಿಗೆ ಸ್ವಾಗತ.

ಅಳದಂಗಡಿ ಸತ್ಯದೇವತೆ ದೈವಸ್ಥಾನಕ್ಕೆ ರಾಜ್ಯಪಾಲರ ಭೇಟಿ ದೈವದ ಪ್ರಸಾದ ಸ್ವೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಳದಂಗಡಿ ಅರಮನೆಯ ಪದ್ಮಪ್ರಸಾದ್ ಅಜಿಲ ರಾಜ್ಯಪಾಲರಿಗೆ ಸ್ವಾಗತ.

 

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು  ತುಳು ನಾಡಿನ ಇತಿಹಾಸ ಪ್ರಸಿದ್ಧ  ಅಳದಂಗಡಿಯ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ ಸತ್ಯದೇವತೆ ದೈವದ ಗಗ್ಗರ ಸೇವೆ ವೀಕ್ಷಿಸಿ‌ ಪ್ರಸಾದ ಸ್ವೀಕರಿಸಿದರು.

 

 

 

 

 

 

ಅವರು ಧರ್ಮಸ್ಥಳ ಕಾರ್ಯಕ್ರಮ ಮುಗಿಸಿ ಉಡುಪಿಗೆ ತೆರಳುವ ಸಂದರ್ಭ ಅಳದಂಗಡಿಗೆ ಭೇಟಿ ನೀಡಿದರು. ಆಳದಂಗಡಿ ಅರಮನೆಯ ಅರಸರಾದ‌‌ ಡಾ. ಪದ್ಮ ಪ್ರಸಾದ್ ಅಜಿಲ ರಾಜ್ಯಪಾಲರನ್ನು ಆತ್ಮೀಯವಾಗಿ ಸ್ವಾಗತಿಸಿದರು.‌ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!