ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಿಕಿತ್ಸೆ ಫಲಿಸದೆ ಗ್ರೂಪ್‌ ಕ್ಯಾಪ್ಟನ್‌ ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ‌ ನಿಧನ: ತಮಿಳುನಾಡಿನಲ್ಲಿ ಸಂಭವಿಸಿದ್ದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡಿದ್ದ ವರುಣ್ ಸಿಂಗ್:

ಚಿಕಿತ್ಸೆ ಫಲಿಸದೆ ಗ್ರೂಪ್‌ ಕ್ಯಾಪ್ಟನ್‌ ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ‌ ನಿಧನ: ತಮಿಳುನಾಡಿನಲ್ಲಿ ಸಂಭವಿಸಿದ್ದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡಿದ್ದ ವರುಣ್ ಸಿಂಗ್:

 

 

ಬೆಂಗಳೂರು: ತಮಿಳುನಾಡಿನಲ್ಲಿ ಸೇನಾ ಸಂಭವಿಸಿದ್ದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನದ ಬಗ್ಗೆ ಟ್ವೀಟ್‌ ಮಾಡಿರುವ ಭಾರತೀಯ ವಾಯುಸೇನೆ, ಇದು ಅತ್ಯಂತ ದುಃಖಕರ ಘಟನೆ ಎಂದು ಕಂಬನಿ ಮಿಡಿದಿದೆ. ಈ ಮೂಲಕ ಕುನೂರು ಬಳಿ ಡಿಸೆಂಬರ್​ 8 ರಂದು ಪತನವಾಗಿದ್ದ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 14 ಮಂದಿಯೂ ನಿಧನ ಹೊಂದಿದಂತಾಗಿದೆ. ದುರಂತ ನಡೆದ ಸಂದರ್ಭ 12 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್‌ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ತೀವ್ರವಾಗಿ ಗಾಯಗೊಂಡಿದ್ದರು ಇವರನ್ನು ತಮಿಳುನಾಡಿನ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಿ ಬಳಿಕ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವಾರದ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!