ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗಣರಾಜ್ಯೋತ್ಸವ ಪಥಸಂಚಲನಕ್ಕೆ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ತಿರಸ್ಕಾರ, ಕೇಂದ್ರ ಸರಕಾರ ಮನುಕುಲಕ್ಕೆ ಮಾಡಿದ ಅಪಚಾರ: ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅಸಮಾಧಾನ.

ಗಣರಾಜ್ಯೋತ್ಸವ ಪಥಸಂಚಲನಕ್ಕೆ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ತಿರಸ್ಕಾರ, ಕೇಂದ್ರ ಸರಕಾರ ಮನುಕುಲಕ್ಕೆ ಮಾಡಿದ ಅಪಚಾರ: ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅಸಮಾಧಾನ.

 

 

 

 

 

ಬೆಳ್ತಂಗಡಿ: ಒಂದೇ ಜಾತಿ ಒಂದೇ ಮತ ಒಂದೇ ದೇವರು ಅನ್ನೋ ತತ್ತ್ವವನ್ನು ಮನುಕುಲಕ್ಕೆ ಸಾರಿದ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಇಡೀ ಮನುಕುಲಕ್ಕೆ ಮಾಡಿದ ಅಪಚಾರ ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆಯ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವದ ಮಾನವ ಜನಾಂಗದ ಅಭಿವೃದ್ದಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಸಂತನ ನೆನಪಿಗಾಗಿ ಕೇರಳ ರಾಜ್ಯ ಕಳಿಸಿದ ಸ್ತಬ್ಧ ಚಿತ್ರವನ್ನು ತಿರಸ್ಕರಿಸಿರುವುದು ಖಂಡನೀಯ, ಶತಮಾನದ ಹಿಂದಿನಿಂದಲೂ ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು, ಸಮಾನತೆಯ ಸುಧಾರಣೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮಹಾನ್ ಸಂತರ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡಬೇಕು, ಈಗಾಗಲೇ ಅನುಮತಿ ತಿರಸ್ಕರಿಸಿದ ಸಮಿತಿಯು ಕೂಡಲೇ ಈ ಬಗ್ಗೆ ಪುನರ್ ವಿಮರ್ಶಿಸಿ ಕ್ರಮ ಕೈಗೊಳ್ಳಬೇಕೆಂದು ರಕ್ಷಿತ್ ಒತ್ತಾಯಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!