ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮದ್ದಡ್ಕ ಬೈಕ್ ಕಾರು ಡಿಕ್ಕಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು.

ಮದ್ದಡ್ಕ ಬೈಕ್ ಕಾರು ಡಿಕ್ಕಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು.

 

 

 

 

ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿಯಿಂದ ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತಿದ್ದ ಬೈಕ್ ಸವಾರನಿಗೆ ಮಂಗಳೂರಿನಿಂದ ಬರುತಿದ್ದ ಕಾರೊಂದು ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡಿದ್ದು ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಅವರು ಚಿಕಿತ್ಸೆಗೆ ಸ್ಪಂಧಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಯುವಕ ಸಕಲೇಶಪುರ ನಿವಾಸಿ ತಣ್ಣೀರುಪಂತ ಸಮೀಪದ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಅರುಣ್ (23) ಎಂದು ತಿಳಿದು ಬಂದಿದೆ ಅವರು ಬೆಳ್ತಂಗಡಿ ಚರ್ಚ್ ರೋಡ್ ಸಮೀಪದ ಟಯರ್ ಕೇರ್ ಸೆಂಟರ್ ನಲ್ಲಿ ಕೆಲಸ ಮಾಡುತಿದ್ದರು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!