ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳು ಇ ಕೆವೈಸಿ( E KYC)ಮಾಡಿಸುವುದು ಕಡ್ಡಾಯ. 2022 ಮಾ 31ರ ಒಳಗೆ ಮಾಡುವಂತೆ ಸೂಚನೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳು ಇ ಕೆವೈಸಿ( E KYC)ಮಾಡಿಸುವುದು ಕಡ್ಡಾಯ. 2022 ಮಾ 31ರ ಒಳಗೆ ಮಾಡುವಂತೆ ಸೂಚನೆ.

 

 

 

 

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ. ಸದರಿ ಯೋಜನೆಯಡಿ ನೈಜ ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು E-KYC ಮಾಡಿಸುವುದು ಕಡ್ಡಾಯವಾಗಿರುತ್ತದೆ. ಆದುದರಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹರಾದ ಫಲಾನುಭವಿಗಳು PM-KISAN ಪೋರ್ಟಲ್‌ನ Farmers Corner ನಲ್ಲಿ ಆಧಾರ್ ಸಂಖ್ಯೆಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಮೂಲಕ ಸ್ವೀಕರಿಸಿದ OTP ಯನ್ನು ದಾಖಲಿಸಿ E-KYC ಮಾಡಿಸಿಕೊಳ್ಳಬಹುದಾಗಿದೆ ಅಥವಾ ಯಾವ ಫಲಾನುಭವಿಯ ಆಧಾರ್‌ ಸಂಖ್ಯೆಗೆ ಮೊಬೈಲ್ ಸಂಖ್ಯೆಯು ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆಗೆ E-KYC ಗಾಗಿ ಕಳಿಸಿದ OTP ಯು ಸ್ವೀಕೃತವಾಗುವುದಿಲ್ಲವೊ ಅಂತಹ ರೈತರು ನಾಗರಿಕ ಸೇವಾ ಕೇಂದ್ರಗಳಿಗೆ (CSC) ತೆರಳಿ ಬಯೋಮೆಟ್ರಿಕ್' ಮೂಲಕ E-KYCನ್ನು ದಿನಾಂಕ: 31.03.2022 ರ ಒಳಗೆ E-KYC ಮಾಡಿಸಿಕೊಳ್ಳಲು ಅವಕಾಶ ಇದೆ.

(ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ/ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡುವುದು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!