ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿವಮೊಗ್ಗ ಹರ್ಷ ಕುಟುಂಬಕ್ಕೆ 1 ಲಕ್ಷ ನೆರವು ಘೋಷಿಸಿದ ಶಾಸಕ ಹರೀಶ್ ಪೂಂಜ.

ಶಿವಮೊಗ್ಗ ಹರ್ಷ ಕುಟುಂಬಕ್ಕೆ 1 ಲಕ್ಷ ನೆರವು ಘೋಷಿಸಿದ ಶಾಸಕ ಹರೀಶ್ ಪೂಂಜ.

 

 

 

ಬೆಳ್ತಂಗಡಿ : ಶಿವಮೊಗ್ಗದಲ್ಲಿ ದುಷ್ಕರ್ಮಿಗಳ ದುಷ್ಕ್ರತ್ಯಕ್ಕೆ ಬಲಿಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ 1 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ಸಾವಿಗೆ ನ್ಯಾಯ ಸಿಗಬೇಕು. ಆತನ ಕೊಲೆ ಮಾಡಿದ ಆರೋಪಿಗಳ ಜೊತೆ, ಅದರ ಹಿಂದಿರುವ ಶಕ್ತಿಗಳನ್ನ ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸುವಂತೆ ಶಾಸಕರು ಒತ್ತಾಯಿಸಿದ್ದಾರೆ.ಕುಟುಂಬದ ಆಧಾರ ಸ್ತಂಭವಾಗಿ, ಕುಟುಂಬದ ನಿರ್ವಹಣೆ ಜವಾಬ್ದಾರಿಯನ್ನು ಹೊಂದಿದ್ದ ಹಿಂದೂ ಕಾರ್ಯಕರ್ತ ಅಗಲಿಕೆಯಿಂದ ಕುಟುಂಬ ನಿರ್ವಹಣೆ ಕಷ್ಟವಾಗಬಾರದು ಎಂದು ಕುಟುಂಬಕ್ಕೆ ಸಹಾಯ ಮಾಡಿದ್ದಾರೆ.

ಹರ್ಷನ ಕುಟುಂಬಕ್ಕೆ ನ್ಯಾಯ ಒದಗಿಸುವುದು ಮತ್ತು ಕುಟುಂಬದ ನಿರ್ವಹಣೆ ಅಗತ್ಯ ಸಹಾಯ ಮಾಡುವುದು ಹಿಂದೂ ಸಮಾಜದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವೈಯಕ್ತಿಕ ನೆಲೆಯಲ್ಲಿ ಅವರ ಬ್ಯಾಂಕ್ ಖಾತೆಯಿಂದ ರೂ. ಒಂದು ಲಕ್ಷ ಹಣವನ್ನು ಹರ್ಷ ಅವರ ಕುಟುಂಬದ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವುದಾಗಿ ಶಾಸಕರು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!