ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಸಿರು ನಿಲ್ಲಿಸಿದ ಹಾಡುಹಕ್ಕಿ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

ಉಸಿರು ನಿಲ್ಲಿಸಿದ ಹಾಡುಹಕ್ಕಿ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

 

 

ಮುಂಬೈ,: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಲತಾ ಮಂಗೇಶ್ಕರ್​ ಅವರಿಗೆ 92 ವರ್ಷವಾಗಿತ್ತು.

ಜನವರಿ 9ರಂದು ಕೋವಿಡ್​ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್​ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಕಾರಣ ಹಾಗೂ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್​ ಅನ್ನು ತೆಗೆದುಹಾಕಲಾಗಿತ್ತು.ಆದರೆ ನಿನ್ನೆಯಿಂದ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಪುನಃ ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಹಾಡುಹಕ್ಕಿ ಕೊನೆಯುಸಿರೆಳೆದಿದ್ದು, ಭಾರತೀಯ ಚಿತ್ರರಂಗ ಸೇರಿದಂತೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!