ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಇಂದು ಕಾಜೂರು ಮಖಾಂ ಶರೀಫ್ ಉರೂಸ್ ಸಮಾರೋಪ; ಸರ್ವಧರ್ಮೀಯರ ಸೌಹಾರ್ದ ಸಂಗಮ

ಇಂದು ಕಾಜೂರು ಮಖಾಂ ಶರೀಫ್ ಉರೂಸ್ ಸಮಾರೋಪ; ಸರ್ವಧರ್ಮೀಯರ ಸೌಹಾರ್ದ ಸಂಗಮ

 

 

 

 

ಬೆಳ್ತಂಗಡಿ; ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾಶರೀಫ್ ಕಾಜೂರು ಇದರ 2022 ನೇ ಉರೂಸ್ ಸಂಭ್ರಮದ ಸಮಾರೋಪ ಸಮಾರಂಭ ಫೆ.27 (ಇಂದು) ನಡೆಯುಲಿದೆ. ಕಾಜೂರು ಸಮಿತಿಗಳ ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್ ಅವರ ಅಧ್ಯಕ್ಷತೆ ಮತ್ತು ಮಾರ್ಗದರ್ಶನದಲ್ಲಿ ನಡೆಯುವ ಸಮಾರೋಪ ಸಮಾರಂಭದ ಅಂಗವಾಗಿ ಸಂಜೆ ಸರ್ವಧರ್ಮೀಯರ ಸೌಹಾರ್ದ ಸಂಗಮ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಬಿ.ಎಮ್ ಫಾರೂಕ್ ನೆರವೇರಿಸಲಿದ್ದಾರೆ‌. ಮುಖ್ಯ ಪ್ರಭಾಣಷವನ್ನು ಕರ್ನಾ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಎನ್‌ಕೆ.ಎಮ್ ಶಾಫಿ ಸ‌ಅದಿ ನೆರವೇರಿಸಲಿದ್ದಾರೆ‌. ಕಾಜೂರು ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯ ಸಯ್ಯಿದ್ ಕಾಜೂರು ತಂಙಳ್ ಆಶಂಶ ನುಡಿಯಲಿದ್ದಾರೆ‌. ಅಝೀಝ್ ದಾರಿಮಿ ಚೊಕ್ಕಬೆಟ್ಟು, ರೆ.ಫಾ. ಜೋಸೆಫ್ ವಲಿಯಪರಂಬಿಲ್ ಸಂದೇಶ ಭಾಷಣ ನೀಡಲಿದ್ದಾರೆ. ಸಮಾರಂಭಕ್ಕೆ ವಿಶೇಷ ಅತಿಥಿಗಳಾಗಿ ವಿಧಾನ ಪರಿಷತ್ತು ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ವಿಧಾನ ಮಂಡಲದ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್ ಮತ್ತು ಪ್ರತಾಪಸಿಂಹ ನಾಯಕ್, ಮಾಜಿ ಸಚಿವರಾದ ಗಂಗಾಧರ ಗೌಡ, ಝಮೀರ್ ಅಹಮ್ಮದ್, ರಮಾನಾಥ ರೈ, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜೀದ್ ಖಾನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ‌ ಸಹಿತ ಪ್ರಮುಖ ಗಣ್ಯರುಗಳು ಭಾಗವಹಿಸಲಿದ್ದಾರೆ. ಉರೂಸ್ ಸಮಾರೋಪದ ಅಂಗವಾಗಿ ಡಾ.‌ಕಾವಳಕಟ್ಟೆ ಹಝ್ರತ್, ಸಯ್ಯಿದ್ ಶಿಹಾಬುದ್ದೀನ್ ತಂಙಳ್, ಕಣಚೂರು ಮೋನು ಹಾಜಿ ಮೊದಲಾದವರು ಭಾಗವಹಿಸಿಸಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!