ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿದ್ಯುತ್  ಟ್ರಾನ್ಸ್ ಫಾರ್ಮರ್  ಸ್ಫೋಟ: ತಂದೆ ಮಗಳು ಸಾವು ಮದುವೆಗೆ ಕಲ್ಯಾಣ ಮಂಟಪ ಬುಕ್ ಮಾಡಿ ಹಿಂದಿರುಗುತ್ತಿರುವಾಗ ಘಟನೆ

ವಿದ್ಯುತ್  ಟ್ರಾನ್ಸ್ ಫಾರ್ಮರ್  ಸ್ಫೋಟ: ತಂದೆ ಮಗಳು ಸಾವು ಮದುವೆಗೆ ಕಲ್ಯಾಣ ಮಂಟಪ ಬುಕ್ ಮಾಡಿ ಹಿಂದಿರುಗುತ್ತಿರುವಾಗ ಘಟನೆ

 

 

ಸಾಂದರ್ಭಿಕ ಚಿತ್ರ.

ಬೆಂಗಳೂರು: ವಿದ್ಯುತ್ ಪರಿವರ್ತಕ ಸ್ಫೋಟಗೊಂಡು ತಂದೆ ,ಮಗಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಂಗನಹಳ್ಳಿ ಎಂಬಲ್ಲಿ ನಡೆದಿದೆ. ಕೆಲವೇ ದಿನಗಳಲ್ಲಿ ನಡೆಯಬೇಕಿದ್ದ ಮದುವೆಗಾಗಿ ಕಲ್ಯಾಣ ಮಂಟಪ ನಿಗದಿ ಪಡಿಸಿ ದ್ವಿಚಕ್ರ ವಾಹನದಲ್ಲಿ ಹಿಂತಿರುಗಿ ಮನೆಗೆ ಬರುತ್ತಿದ್ದಾಗ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್​ ಪರಿವರ್ತಕ ಸ್ಫೋಟಗೊಂಡು ಯುವತಿ ಚೈತನ್ಯ(25), ಅವರ ತಂದೆ ಶಿವರಾಜ್(55) ಗಂಭೀರವಾಗಿ ಗಾಯಗೊಂಡಿದ್ದರು.

ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ಬುಧವಾರ ಘಟನೆ ನಡೆದಿತ್ತು‌. ಟ್ರಾನ್ಸ್​ಫಾರ್ಮರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಾಗಿದ್ದ ಶಿವರಾಜ್ ಹಾಗೂ ಚೈತನ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂದಿನ ವಾರ ಚೈತನ್ಯಳ ನಿಶ್ಚಿತಾರ್ಥ ನಿಗದಿಯಾಗಿತ್ತಲ್ಲದೆ, ಕೆಲ ದಿನಗಳಲ್ಲೇ ಮದುವೆ ಸಮಾರಂಭ ನಡೆಯಬೇಕಿತ್ತು.ಮದುವೆಗೆ ಕಲ್ಯಾಣ ಮಂಟಪವೊಂದನ್ನು ಬುಕ್​ ಮಾಡಿಕೊಂಡು ಸ್ಕೂಟಿಯಲ್ಲಿ ನೈಸ್‌ರಸ್ತೆಯ ಮಂಗನಹಳ್ಳಿ ಬಳಿ ಬರುತ್ತಿದ್ದಾಗ, ವಿದ್ಯುತ್​ ಪರಿವರ್ತಕ ಇದ್ದಕ್ಕಿದ್ದಂತೆ ಸ್ಫೋಟಗೊಂಡಿತ್ತು. ಸ್ಥಳೀಯರು ಕೂಡಲೇ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅವಘಡದಿಂದ ಇಬ್ಬರನ್ನೂ ಕಳೆದುಕೊಂಡು ಮದುವೆಯ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!