ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜೆಸಿಐ ಮಡಂತ್ಯಾರು ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನಾಚರಣೆ

ಜೆಸಿಐ ಮಡಂತ್ಯಾರು ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನಾಚರಣೆ

 

 

 

ಮಡಂತ್ಯಾರ್ : ಜೆಸಿಐ ಮಡಂತ್ಯಾರ್ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ 09 ರಂದು ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿನಿ ನಿಲಯ ಮಡಂತ್ಯಾರ್ ಇಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಪೃಥ್ವಿ ಪ್ರಶಾಂತ್ ಶೆಟ್ಟಿ ಇವರು ದೈಹಿಕ ಆರೋಗ್ಯ ಮತ್ತು ಮಾನಸಿಕ ಒತ್ತಡ ನಿವಾರಣೆಯ ಬಗ್ಗೆ ಮಾಹಿತಿ ನೀಡಿದರು.

 

ಈ ಸಂದರ್ಭದಲ್ಲಿ ಮಹಾಮಾರಿ ಕೊರೊನಾ ಸಂದರ್ಭದಲ್ಲಿ ನಿಸ್ವಾರ್ಥ ಸೇವೆಗೈದ ಆರೋಗ್ಯ ಸಹಾಯಕಿ ಶ್ರೀಮತಿ ಲೋಲಾಕ್ಷಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ದಿವ್ಯಲಕ್ಷ್ಮಿ ಅವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿ ರಮ್ಯಾ ಮೇಧಾವಿ ವಹಿಸಿದ್ದು ಅತಿಥಿಗಳಾಗಿ ಪಾರೆಂಕಿ ವಸತಿ ನಿಲಯದ ಪಾಲಕರಾದ ಶ್ರೀ ಮತಿ ಅಂಬಿಕಾ ಇವರುಭಾಗವಹಿಸಿದರು.

 

 

 

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ,ವಲಯಾಧಿಕಾರಿಗಳಾದ ಜೇಸಿ ಮೇಧಾವಿ ಎಂ., ಜೇಸಿ ಪ್ರಶಾಂತ್ ಕಂಡೆಂತ್ಯಾರು, ನಿಕಟಪೂರ್ವ ಅಧ್ಯಕ್ಷ ಜೇಸಿ ಪ್ರಸನ್ನ ಶೆಟ್ಟಿ, ಕಾರ್ಯದರ್ಶಿ ಜೇಸಿ ಅಜೇಯ್ ಶೆಟ್ಟಿ, ಮಹಿಳಾ ಜೇಸಿ ವಿಭಾಗದ ಸದಸ್ಯರು ಉಪಸ್ಥಿತರಿದ್ದರು,

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!