ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುದೇವ ವಿವಿಧೋದ್ಧೇಶ ಸಹಕಾರಿ ಸಂಘ ಅಧ್ಯಕ್ಷರಾಗಿ ಪದ್ಮನಾಭ ಮಾಣಿಂಜ: ಉಪಾಧ್ಯಕ್ಷರಾಗಿ: ಭಗೀರಥ ಜಿ.ಆಯ್ಕೆ

ಗುರುದೇವ ವಿವಿಧೋದ್ಧೇಶ ಸಹಕಾರಿ ಸಂಘ ಅಧ್ಯಕ್ಷರಾಗಿ ಪದ್ಮನಾಭ ಮಾಣಿಂಜ: ಉಪಾಧ್ಯಕ್ಷರಾಗಿ: ಭಗೀರಥ ಜಿ.ಆಯ್ಕೆ

 

 

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಪದ್ಮನಾಭ ಮಾಣಿಂಜ ಹಾಗೂ ಉಪಾಧ್ಯಕ್ಷರಾಗಿ ನೋಟರಿ ವಕೀಲ ಭಗೀರಥ ಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

 

              ಪದ್ಮನಾಭ ಮಾಣಿಂಜ‌

 

ಸಂಘದ ನೂತನ ಆಡಳಿತ ಮಂಡಳಿಗೆ ಇತ್ತೀಚೆಗೆ ಚುನಾವಣೆ ನಡೆದು, 16ಮಂದಿ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದರು ಸಂಘಕ್ಕೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಾ.24 ರಂದು ನಡೆಯಿತು. ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಕನ್ಯಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

 

                        ಭಗೀರಥ. ಜಿ.

 

ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಮಾಜಿ ಶಾಸಕ ಕೆ ವಸಂತ ಬಂಗೇರ, ಸುಜಿತಾ ವಿ ಬಂಗೇರ, ತನುಜಾ ಶೇಖರ್, ಶೇಖರ ಬಂಗೇರ, ಜಗದೀಶ್ಚಂದ್ರ ಡಿ.ಕೆ, ಸಂಜೀವ ಪೂಜಾರಿ, ಕೆ.ಪಿ.ದಿವಾಕರ, ಚಂದ್ರಶೇಖರ, ಧರ್ಣಪ್ಪ ಪೂಜಾರಿ, ಗಂಗಾಧರ ಮಿತ್ತಮಾರ್, ಡಾ. ರಾಜರಾಮ್, ಜಯವಿಕ್ರಮ್ ಪಿ, ಧರಣೇಂದ್ರ ಕುಮಾರ್, ಆನಂದ ಪೂಜಾರಿ ಕೆ. ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!