ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ E-KYC ಮಾಡಿಸಲು ಇವತ್ತು ಕೊನೆಯ ದಿನ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ E-KYC ಮಾಡಿಸಲು ಇವತ್ತು ಕೊನೆಯ ದಿನ

 

 

 

ಬೆಳ್ತಂಗಡಿ:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ. ಸದರಿ ಯೋಜನೆಯಡಿ ನೈಜ ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯುತ್ತಿದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು E-KYC ಮಾಡಿಸುವುದು ಕಡ್ಡಾಯವಾಗಿರುತ್ತದೆ. ಆದುದರಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹರಾದ ಫಲಾನುಭವಿಗಳು PM-KISAN ಪೋರ್ಟಲ್‌ನ Farmers Corner ನಲ್ಲಿ ಆಧಾರ್ ಸಂಖ್ಯೆಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಮೂಲಕ ಸ್ವೀಕರಿಸಿದ OTPಯನ್ನು ದಾಖಲಿಸಿ E-KYC ಮಾಡಿಸಿಕೊಳ್ಳಬಹುದಾಗಿದೆ ಅಥವಾ ಯಾವ ಫಲಾನುಭವಿಯ ಆಧಾರ್‌ ಸಂಖ್ಯೆಗೆ ಮೊಬೈಲ್ ಸಂಖ್ಯೆಯು ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆಗೆ E-KYC ಗಾಗಿ ಕಳಿಸಿದ OTPಯು ಸ್ವೀಕೃತವಾಗುವುದಿಲ್ಲವೊ ಅಂತಹ ರೈತರು ನಾಗರಿಕ ಸೇವಾ ಕೇಂದ್ರಗಳಿಗೆ (CSC) ತೆರಳಿ ಬಯೋಮೆಟ್ರಿಕ್' ಮೂಲಕ E-KYC ನ್ನು ಮಾಡಿಸಲು ದಿನಾಂಕ:31.03.2022 (ಇವತ್ತು) ಕೊನೆಯ ದಿನವಾಗಿದೆ ಅದ್ದರಿಂದ ದಯವಿಟ್ಟು  ಮಾಡಿಸದೇ ಇರುವವರು   E-KYC ಮಾಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ.

(ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತಸಂಪರ್ಕಕೇಂದ್ರ/ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

http://prajaprakasha.com/?p=15298

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!