ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಛ ಪ್ರಸ್ತಾವನೆಗೈದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಆರ್. ಸೇರಿದಂತೆ ಪಂಚಾಯತ್ ಸದಸ್ಯರುಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಸಮಗ್ರ ಸಂಜೀವಿನಿ ಸ್ರ್ರೀ ಶಕ್ತಿ ಮಹಿಳಾ ಸಂಘದ ಅಧ್ಯಕ್ಷೆ ಯಶೋದ ರಾಘವೇಂದ್ರ ನಗರ ಸಂಘದ ಸದಸ್ಯರುಗಳು , ಪಂಚಾಯತ್ ಸಿಬ್ಬಂದಿಗಳು ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ಯಶೋಧರ ಶೆಟ್ಟಿ ಧನ್ಯವಾದವಿತ್ತರು.ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಕಡೆಗಳಲ್ಲಿ ರಸ್ತೆ ಬದಿಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಬಾಟಲಿಗಳನ್ನು ತೆರವುಗೊಳಿಸಿ ಸ್ವಚ್ಚ ಗೊಳಿಸಲಾಯಿತು.