ಮೇ.11ರಂದು ಬೆಳಿಗ್ಗೆ 9ಗಂಟೆಯಿಂದ ಭಜನಾ ಕಾರ್ಯಕ್ರಮ, 10ಗಂಟೆಗೆ ಹಸಿರು ಹೊರಕಾಣಿಕೆ ಸಮರ್ಪಣೆ, ಸಂಜೆ 3ಗಂಟೆಯಿಂದ ಭಜನಾ ಕಾರ್ಯಕ್ರಮ, 7.30ರಿಂದ ಸಾಮೂಹಿಕ ಪ್ರಾರ್ಥನೆ, ಆಚಾರ್ಯವರಣ, ಗೋದಾನ ಪುಣ್ಯಾಹ, ಪ್ರಸಾದ ಶುದ್ಧಿ, ಯಕ್ಷೋಕ್ರಣಹೋಮ, ವಾಸ್ತುಕಲಶ ಪೂಜೆ, ವಾಸ್ತು ಹೋಮ, ವಾಸ್ತು ಬಲಿ, ಕಲಶಾಭಿಷೇಕ, ರಾತ್ರಿ ಪೂಜೆ ನಡೆಯಲಿದೆ. ಮೇ.12ರಂದು ಬೆಳಿಗ್ಗೆ 7.30ರಿಂದ ತ್ರಿಕಾಲ ಪೂಜೆ, ಗಣಪತಿ ಹೋಮ, ಬಿಂಬ ಶುದ್ಧಿ, ಅನುಜ್ಞಾ ಕಲಶ, ಅನುಜ್ಞಾ ಪೂಜೆ, ಸ್ಥಳ ಶುದ್ಧಿ, ಕುಂಭೇಶ ಕರ್ಕರೀ ಪೂಜೆ, ಶಯ್ಯ ಪೂಜೆ, ಜೇವೋದ್ವಾಸನೆ, 9ಗಂಟೆಯಿಂದ 12ಗಂಟೆಯವರಗೆ ಭಜನಾ ಕಾರ್ಯಕ್ರಮ, ಮಧ್ಯಾಹ್ನ ತ್ರಿಕಾಲ ಪೂಜೆ, ಸಂಜೆ 3ರಿಂದ 7ಗಂಟೆಯವರೆಗೆ ಭಜನಾ ಕಾರ್ಯಕ್ರಮ, ಸಂಜೆ 8.30ಕ್ಕೆ ಹಸಿರು ಹೊರಕಾಣಿಕೆ ಸಮರ್ಪಣೆ, 6ಗಂಟೆಯಿಂದ ಅಧಿವಾಸ ಹೋಮ, ಕಲಶಪೂಜೆ, ಧ್ಯಾನಾಧಿವಾಸ, ತ್ರಿಕಾಲ ಪೂಜೆ ನಡೆಯಲಿದೆ. ಸಂಜೆ 7ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಹಾಗೂ ಶ್ರೀ ಧಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶಿರ್ವಚನ ನೀಡಲಿದ್ದಾರೆ. ಶಾಸಕ ಹರೀಶ್ ಪೂಂಜಾ ಶುಭಾಶಂಸನೆ ಮಾಡಲಿದ್ದು ಮಾಯಿಲಕೋಟೆ ದೈವಸನ್ನಿಧಿಯ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್, ಸಂಸದ ನಳೀನ್ ಕುಮಾರ್ ಕಟೀಲ್, ಬಂದರು, ಮೀನುಗಾರಿಕೆ, ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ, ವಿಧಾನಪರಿಷತ್ ಸದಸ್ಯರಾದ ಕೆ. ಪ್ರತಾಪ್‌ಸಿಂಹ ನಾಯಕ್, ಕೆ. ಹರೀಶ್ ಕುಮಾರ್, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ತುಳು ಸಂಘ ಬರೋಡ ಅಧ್ಯಕ್ಷ ಕೆ. ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಭಾಸ್ಕರ ಗೌಡ ದೇವಸ್ಯ, ಶ್ರೀ ಕ್ಷೇತ್ರ ಧ.ಗ್ರಾ ಯೋಜನೆ (ರಿ.) ಧರ್ಮಸ್ಥಳ ಇದರ ಪ್ರಾದೇಶಿಕ ನಿರ್ದೇಶಕ ಬಿ. ಜಯರಾಮ ನೆಲ್ಲಿತ್ತಾಯ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್‌ನ ಅಧ್ಯಕ್ಷ ರಕ್ಷಿತ್ ಶಿವರಾಂ, ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗುರೂಜಿ, ಸೌತಡ್ಕ ಶ್ರೀಮಹಾಗಣಪತಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಹರೀಶ್ ರಾವ್, ಮಾಜಿ ಜಿ.ಪಂ ಅಧ್ಯಕ್ಷ ಕೊರಗಪ್ಪ ನಾಯ್ಕ, ಕೊಕ್ಕಡ ಗ್ರಾ.ಪಂ ಅಧ್ಯಕ್ಷ ಯೋಗೀಶ್ ಆಲಂಬಿಲ, ಮಾಯಿಲಕೋಟೆ ದೈವ ಸನ್ನಿಧಿ ಜೀಣೋದ್ಧಾರ ಸಮಿತಿ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಕೋಟೆಮಾಯಿಲ ಸಮುದಾಯ ಸಂಘ (ರಿ.) ಸುಳ್ಯ ಇದರ ಅಧ್ಯಕ್ಷ ಕುಮಾರ್ ಬಳ್ಳಕ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಮೇ.13ರಂದು ಕೆ.ವಿ ಪದ್ಮನಾಭ ತಂತ್ರಿ ಎಡಮನೆ, ಅರವತ್ತು ನೀಲೇಶ್ವರ ಕೇರಳ ಇವರ ನೇತೃತ್ವದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ, ಬೆಳಿಗ್ಗೆ 7ರಿಂದ ಗಣಹೋಮ, ಪ್ರಸಾದ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ, 9ಗಂಟೆಯಿಂದ ಭಜನಾ ಕಾರ್ಯಕ್ರಮ, ಸಂಜೆ 3ರಿಂದ 4.30ರವರೆಗೆ ಗೀತಸಾಹಿತ್ಯ ಸಂಭ್ರಮ, 4.30ರಿಂದ 7ಗಂಟೆಯವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 6ರಿಂದ ಕೋಟೆ ಚಾಮುಂಡಿ, ವರ್ಣಾರ ಪಂಜುರ್ಲಿ , ಕಲ್ಲುರ್ಟಿ, ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ ಎಂದರು. ಗೋಷ್ಠಿಯಲ್ಲಿ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಪ್ರಧಾನ ಕಾರ್ಯದರ್ಶಿ ಶಾಂತರಾಮ ಎ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಪ್ರಚಾರ- ಮಾಧ್ಯಮ ಸಮಿತಿ ಅಧ್ಯಕ್ಷ ಗಣೇಶ್ ಕುಲಾಯಿ, ಮೊದಲಾದವರು ಉಪಸ್ಥಿತರಿದ್ದರು.