ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜೂ.21 ಅಂತಾರಾಷ್ಟ್ರೀಯ ಯೋಗ ದಿನ: ಎಲ್ಲ ಶಾಲೆಗಳಲ್ಲಿ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ

ಜೂ.21 ಅಂತಾರಾಷ್ಟ್ರೀಯ ಯೋಗ ದಿನ: ಎಲ್ಲ ಶಾಲೆಗಳಲ್ಲಿ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ

 

 

 

ಬೆಂಗಳೂರು: ಜೂನ್ 21ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಹಾಗೂ ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ರಾಜ್ಯದ ಎಲ್ಲ ಶಾಲೆಗಳಲ್ಲಿ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತಿಳಿಸಲಾಗಿದೆ.

ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ರಾಜ್ಯದ ಎಲ್ಲ ಶಾಲೆಗಳಲ್ಲಿ ಜೂನ್ 21ರಂದು ಅರ್ಧ ದಿನದ ಶಾಲೆಯನ್ನು ನಡೆಸಲು ಸೂಚಿಸಲಾಗಿದೆ. ಆ ದಿನದ ಮೊದಲ ಒಂದೂವರೆ ಗಂಟೆಯ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾದ ಯೋಗಾಸನಗಳ ಅಭ್ಯಾಸಗಳನ್ನು ಹಾಗೂ ಪ್ರದರ್ಶನಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದೆ. ಆ ದಿನದ ಅರ್ಧ ದಿನದ ಪಾಠಗಳನ್ನು ಸರಿದೂಗಿಸಲು ಜೂನ್ 25 ಶನಿವಾರದಂದು ಪೂರ್ಣ ದಿನದ ಶಾಲೆಯನ್ನು ನಡೆಸುವಂತೆ ಆದೇಶಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!