ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ. ಜಿಲ್ಲೆಯಾದ್ಯಂತ ಭಾರೀ ವರ್ಷ ಧಾರೆ, ಶಾಲಾ ಕಾಲೇಜುಗಳಿಗೆ ನಾಳೆ ರಜೆ:ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ: ಚರಂಡಿ ಅವ್ಯವಸ್ಥೆ, ಹೆದ್ದಾರಿಗಳು ಜಲಾವೃತ, ತಗ್ಗು ಪ್ರದೇಶಗಳಿಗೆ ನುಗ್ಗುತ್ತಿರುವ ನೀರು:

ದ.ಕ. ಜಿಲ್ಲೆಯಾದ್ಯಂತ ಭಾರೀ ವರ್ಷ ಧಾರೆ, ಶಾಲಾ ಕಾಲೇಜುಗಳಿಗೆ ನಾಳೆ ರಜೆ:ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ: ಚರಂಡಿ ಅವ್ಯವಸ್ಥೆ, ಹೆದ್ದಾರಿಗಳು ಜಲಾವೃತ, ತಗ್ಗು ಪ್ರದೇಶಗಳಿಗೆ ನುಗ್ಗುತ್ತಿರುವ ನೀರು:

 

 

ಬೆಳ್ತಂಗಡಿ:ಮಳೆ ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನ ಬಳಿಕ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಮಳೆ ಬಿರುಸು ಮುಂದುವರಿದ ಹಿನ್ನಲೆಯಲ್ಲಿ ಶುಕ್ರವಾರವೂ ರಜೆ ಘೋಷಿಸಲಾಗಿದೆ.

ಭಾರೀ ಮಳೆಯಿಂದಾಗಿ ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ರಸ್ತೆಗಳಲ್ಲೆ ನೀರು ಹರಿದು ಹೋಗುತಿದ್ದು ವಾಹನ ಸವಾರರು ಪರದಾಡುವಂತಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಮನೆಗಳು ನೀರಿನಿಂದಾವೃತ್ತವಾಗಿವೆ.ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ವಿವಿದ ರೀತಿಯಲ್ಲಿ ಟ್ರೋಲ್ ವಿಡಿಯೋಗಳು ಹರಿದಾಡುತ್ತಿವೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!