ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸುಳ್ಯ- ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ ಭಯ ಭೀತರಾದ ಜನ

ಸುಳ್ಯ- ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ ಭಯ ಭೀತರಾದ ಜನ

 

 

 

ಪುತ್ತೂರು:ಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ತಾಲೂಕಿನ ಸುಳ್ಯ ಪಟ್ಟಣ, ಉಬರಡ್ಕ, ಮಡಪ್ಪಾಡಿ, ಕೊಲ್ಲಮೊಗ್ರು, ಕಲ್ಮಕಾರು, ದೇವಚಳ್ಳ, ಜಾಲ್ಸುರು, ಆಲೆಟ್ಟಿ, ಐವರ್ನಾಡು, ಅಮರಮುಡ್ನೂರು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಭೂಮಿ ಕಂಪಿಸಿದೆ. 10-15 ಸೆಕೆಂಡುಗಳ ಕಾಲ ಭೂಮಿ ನಡುಗಿದ್ದು ಜನರು ಭಯಗೊಂಡಿದ್ದಾರೆ. ಕಡಬ ತಾಲೂಕಿನ ಸುಬ್ರಹ್ಮಣ್ಯ, ಐನೆಕಿದು, ಕೊಡಗು ಜಿಲ್ಲೆಯ ಕರಿಕೆ, ಭಾಗಮಂಡಲ, ಸಂಪಾಜೆ, ಕಾಸರಗೋಡು ಗಡಿಭಾಗ ಪಾಣತ್ತೂರು, ಕಲ್ಲಪ್ಪಳ್ಳಿ ಭಾಗಗಳಲ್ಲೂ ಭೂಕಂಪನ ಅನುಭವವಾಗಿದೆ ಎಂದು ತಿಳಿದುಬಂದಿದೆ. ಸುಳ್ಯದ ಕುರುಂಜಿಗುಡ್ಡೆ, ಜಾಲ್ಸೂರು ಗ್ರಾಮದ ಸೋಣಂಗೇರಿ ಭಾಗಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಬಗ್ಗೆಯೂ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!