ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ₹ 50 ಏರಿಕೆ :ಮತ್ತೆ ಜನರಿಗೆ ಬೆಲೆ ಏರಿಕೆ ಶಾಕ್..!:ಇಂದಿನಿಂದಲೇ ಹೊಸ ದರ ಜಾರಿ:

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ₹ 50 ಏರಿಕೆ :ಮತ್ತೆ ಜನರಿಗೆ ಬೆಲೆ ಏರಿಕೆ ಶಾಕ್..!:ಇಂದಿನಿಂದಲೇ ಹೊಸ ದರ ಜಾರಿ:

ಬೆಂಗಳೂರು:ಈಗಾಗಲೇ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನತೆ ಮತ್ತೆ ಬೆಲೆ ಏರಿಕೆ ಶಾಕ್‌ಗೆ ಒಳಗಾಗಿದ್ದಾರೆ. ಗೃಹ ಬಳಕೆಯ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಈ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬರಲಿದೆ.

ಈ ಹಿಂದೆ ಮೇ 19 ರಂದು ಗೃಹ, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌​ ದರವನ್ನು ಪ್ರತಿ ಸಿಲಿಂಡರ್‌ಗೆ 3.5 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು.ದೆಹಲಿಯಲ್ಲಿ ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್‌ ದರ 1,053 ರೂ. ಆಗಿದೆ. 5 ಕೆಜಿಯ ಗೃಹ ಬಳಕೆ ಸಿಲಿಂಡರ್ ಬೆಲೆ ಸಹ ಹೆಚ್ಚಿಸಲಾಗಿದ್ದು, ಪ್ರತಿ ಸಿಲಿಂಡರ್​ಗೆ 18 ರೂ. ಏರಿಕೆ ಮಾಡಲಾಗಿದೆ.

19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 8.50 ರೂ. ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ 1,005.50 ರೂ.ಗೆ ಲಭ್ಯವಾಗುತ್ತಿದೆ.ಇಂದಿನಿಂದ ರೂ 1055.50 ರೂ ಆಗಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!