ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅಭಿನಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅಭಿನಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

 

 

ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ನೂತನವಾಗಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಹೆಗ್ಗಡೆ ಅವರಿಗೆ ಸಿಎಂ ಬೊಮ್ಮಾಯಿ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಅಭಿನಂದಿಸಿದರು. ನಂತರ ವೀರೇಂದ್ರ ಹೆಗ್ಗಡೆಯವರೊಂದಿಗೆ ಮುಖ್ಯಮಂತ್ರಿ ಕೆಲಕಾಲ ಮಾತುಕತೆ ನಡೆಸಿದರು. ಧಾರ್ಮಿಕ ಕ್ಷೇತ್ರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸ್ವಯಂ ಉದ್ಯೋಗ ಸೃಷ್ಟಿಗೆ ನೀಡುತ್ತಿರುವ ಕೊಡುಗೆಗೆ ಮೆಚ್ಚುಗೆ ಸೂಚಿಸಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದಕ್ಕೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಚಿವ ಶಿವರಾಮ್ ಹೆಬ್ಬಾರ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಡಾ. ಶಿವರಾಜ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!