ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕಗ್ಗೊಲೆ : ಪುತ್ತೂರು, ಸುಳ್ಯ, ಕಡಬ ತಾಲೂಕು ಬಂದ್ ಗೆ ಕರೆಕೊಟ್ಟ ಬಜರಂಗದಳ:

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕಗ್ಗೊಲೆ : ಪುತ್ತೂರು, ಸುಳ್ಯ, ಕಡಬ ತಾಲೂಕು ಬಂದ್ ಗೆ ಕರೆಕೊಟ್ಟ ಬಜರಂಗದಳ:

 

 

 

ಪುತ್ತೂರು:   ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಪ್ರವೀಣ್ ಅವರು ಜುಲೈ 26 ರಾತ್ರಿ ಎಂದಿನಂತೆ ತನ್ನ ಕೋಳಿ ಅಂಗಡಿಯನ್ನು ಮುಚ್ಚುತ್ತಿರುವ ಸಂದರ್ಭ ಬೈಕಿನಲ್ಲಿ ಬಂದಿದ್ದ 3 ಮಂದಿ ಮುಸುಕುದಾರಿ ದುಷ್ಕರ್ಮಿಗಳು ಅವರಿಗೆ ತಲವಾರಿನಿಂದ ದಾಳಿ ನಡೆಸಿದ್ದರು.ಚಿಂತಾಜನಕ ಸ್ಥಿತಿಯಲ್ಲಿ ಒದ್ದಾಡುತಿದ್ದ ಅವರನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದರು. ಹತ್ಯೆ ಬೆನ್ನಲ್ಲೇ ಆಕ್ರೋಶಗೊಂಡ ಹಿಂದೂ ಸಂಘಟನೆಗಳು ಆಸ್ಪತ್ರೆ ಎದುರು ಜಮಾಯಿಸಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಎಂದು ಪಟ್ಟು ಹಿಡಿದು ಹಂತಕರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನೆಯನ್ನು ನಡೆಸಿದರು. ಈ ಹಿನ್ನೆಲೆಯಲ್ಲಿ ಹತ್ಯೆಯನ್ನು ಖಂಡಿಸಿ ಜು 27 ಇಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ನಡೆಸಬೇಕೆಂದು  ಬಜರಂಗ ದಳ ಬಂದ್ ಗೆ ಕರೆ ನೀಡಿದೆ.‌

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!