ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಿಂತಕ ದಲಿತ ಮುಖಂಡ ಪಿ. ಡೀಕಯ್ಯ ಸಾವು ಅಸಹಜ :ಕುಟುಂಬಸ್ಥರಿಂದ ದೂರು: ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ:

ಚಿಂತಕ ದಲಿತ ಮುಖಂಡ ಪಿ. ಡೀಕಯ್ಯ ಸಾವು ಅಸಹಜ :ಕುಟುಂಬಸ್ಥರಿಂದ ದೂರು: ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ:

 

 

ಬೆಳ್ತಂಗಡಿ: ಚಿಂತಕ ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವು ಅಸಹಜ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಹೊರತೆಗೆಯುವ ಪ್ರಕ್ರಿಯೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ನಡೆಯುತ್ತಿದೆ. ಡೀಕಯ್ಯ ಅವರು  ಜುಲೈ 08 ರಂದು ಮಿದುಳಿನ ರಕ್ತಸ್ರಾವದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು ಕುಟುಂಬಸ್ಥರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೂರು ಬಂದಿರುವ ಬಗ್ಗೆ ಪೊಲೀಸ್ ಇಲಾಖೆ, ತನಿಖೆಗೆ ಮುಂದಾಗಿದೆ.ಬೆಳ್ತಂಗಡಿ ತಹಶೀಲ್ದಾರ್ , ಹಿರಿಯ ಪೊಲೀಸ್ ಅಧಿಕಾರಿ,ಆರೋಗ್ಯ ಇಲಾಖೆ ಅಧಿಕಾರಿಗಳು ಅವರ ಮೃತ ದೇಹದ ಅಂತ್ಯ ಸಂಸ್ಕಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು ಮರಣೋತ್ತರ ಪರೀಕ್ಷೆಗಾಗಿ ಹೊಳಲಾಗಿರುವ ಮೃತ ದೇಹವನ್ನು ಹೊರತೆಗೆಯುವ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!