ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಪ್ರಮೋದ್​ ಮುತಾಲಿಕ್​​ ಭೇಟಿ: ದ.ಕ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ:

ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಪ್ರಮೋದ್​ ಮುತಾಲಿಕ್​​ ಭೇಟಿ: ದ.ಕ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ:

 

 

 

 

ಮಂಗಳೂರು: ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರದೇಶದಲ್ಲಿ ಪ್ರವೇಶ ನಿರ್ಬಂಧಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ. ಪ್ರಮೋದ್ ಮುತಾಲಿಕ್ ಮೃತ ಪ್ರವೀಣ್ ಮನೆಗೆ ಭೇಟಿ ನೀಡುವುದಾಗಿ ಮಾಹಿತಿ ತಿಳಿದು ಬಂದ ಹಿನ್ನೆಲೆ ಈ ನಿಷೇಧ ಜಾರಿ ಮಾಡಲಾಗಿದೆ.

 

 

 

ಪ್ರಮೋದ್ ಮುತಾಲಿಕ್‌ ಭೇಟಿ ಮಾಡಿದ ಸ್ಥಳದಲ್ಲಿ ಉದ್ರೇಕಕಾರಿ ಭಾಷಣ ಮಾಡಿ, ಕೋಮು ಸೌಹಾರ್ದತೆ ಹದಗೆಡಿಸಿದ ಪ್ರಕರಣಗಳು ನಡೆದಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಇಂದು ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೆ ಪ್ರವೇಶ ನಿರ್ಬಂಧಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!