ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಟೋಲ್ ಗೇಟ್ ಬಳಿ ಅಂಬುಲೆನ್ಸ್ ಪಲ್ಟಿ:ಭೀಕರ ಅಪಘಾತಕ್ಕೆ  ನಾಲ್ವರು  ಸಾವು: ಶಿರೂರು ಟೋಲ್ ಪ್ಲಾಝಾ ಬಳಿ ಘಟನೆ:

ಟೋಲ್ ಗೇಟ್ ಬಳಿ ಅಂಬುಲೆನ್ಸ್ ಪಲ್ಟಿ:ಭೀಕರ ಅಪಘಾತಕ್ಕೆ  ನಾಲ್ವರು  ಸಾವು: ಶಿರೂರು ಟೋಲ್ ಪ್ಲಾಝಾ ಬಳಿ ಘಟನೆ:

 

 

ಭಟ್ಕಳ: ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್​ ವಾಹನವೊಂದು ಟೋಲ್‌ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೂರು ಟೋಲ್‌ ಗೇಟ್​​ನಲ್ಲಿ ಸಂಭವಿಸಿದೆ.

ಶಿರೂರು ಟೋಲ್‌ ಪ್ಲಾಝಾ ಬಳಿ ಬರುತ್ತಿದ್ದಂತೆಯೇ ಟೋಲ್ ಗೇಟ್ ಸಿಬ್ಬಂದಿಯನ್ನು ತಪ್ಪಿಸಲು ಹೋಗಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್​ ಸಂಚಾರಕ್ಕೆ ನೆರವು ನೀಡಲು ಮುಂದಾಗಿದ್ದ ಟೋಲ್‌ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್​ ಜಖಂ ಆಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಬೈಂದೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!