Home › ನಾವೂರು : ಬೃಹತ್ ರಕ್ತದಾನ ಶಿಬಿರ ಶಾಸಕ ಹರೀಶ್ ಪೂಂಜ ಉದ್ಘಾಟನೆ
ನಾವೂರು : ಬೃಹತ್ ರಕ್ತದಾನ ಶಿಬಿರ ಶಾಸಕ ಹರೀಶ್ ಪೂಂಜ ಉದ್ಘಾಟನೆ
ONLINE PUDU / Sunday, July 10, 2022
ಬೆಳ್ತಂಗಡಿ: ನವೋದಯ ಟ್ರಸ್ಟ್ (ರಿ.) ನಾವೂರು, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ರಕ್ತ ನಿಧಿ ಕೇಂದ್ರ ಕೆ. ಎಂ. ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ, ಗ್ರಾ.ಪಂ ಸದಸ್ಯ ಇಂದಬೆಟ್ಟು ಸೊಸೈಟಿ ಅಧ್ಯಕ್ಷ ಹರೀಶ್ ಸಾಲಿಯಾನ್, ಡಾ. ಪ್ರದೀಪ್ ಕುಮಾರ್ , ಹರೀಶ್ ಕಾರಿಂಜ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.