ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನವ ಬೆಳ್ತಂಗಡಿ ನಿರ್ಮಾಣದ ಸಂಕಲ್ಪ ಸಕಾರ: ಶಾಸಕ ಹರೀಶ್ ಪೂಂಜ: ಉಜಿರೆ ಚತುಷ್ಪಥ ರಸ್ತೆಯ ಬೀದಿ ದೀಪ ಉದ್ಘಾಟನೆ

ನವ ಬೆಳ್ತಂಗಡಿ ನಿರ್ಮಾಣದ ಸಂಕಲ್ಪ ಸಕಾರ: ಶಾಸಕ ಹರೀಶ್ ಪೂಂಜ: ಉಜಿರೆ ಚತುಷ್ಪಥ ರಸ್ತೆಯ ಬೀದಿ ದೀಪ ಉದ್ಘಾಟನೆ

 

 

ಬೆಳ್ತಂಗಡಿ: ನವ ಬೆಳ್ತಂಗಡಿ ನಿರ್ಮಾಣದ ಸಂಕಲ್ಪ ಸಕಾರಗೊಳ್ಳುತಿದ್ದು ಕಳೆದ ನಾಲ್ಕು ವರ್ಷಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅಭೂತಪೂರ್ವ ಅಭಿವೃದ್ಧಿ ಕೆಲಸಗಳು ನಡೆದಿದ್ದು ಈ ಮೂಲಕ ಬೆಳ್ತಂಗಡಿ ತಾಲೂಕು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಜುಲೈ 08 ಶುಕ್ರವಾರ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚತುಷ್ಪಥ ರಸ್ತೆಯ ಬೀದಿ ದೀಪ ಉದ್ಘಾಟಿಸಿ ಮಾತನಾಡಿದರು.

 

 

ಉಜಿರೆ ಗ್ರಾಮ ತಾಲೂಕಿನ ಕೇಂದ್ರ ಭಾಗವಾಗಿ ಮೂಡಿಬರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಜನೋಪಯೋಗಿ ಕೆಲಸಗಳ ಮೂಲಕ ಅಭಿವೃದ್ಧಿ ಪಡಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಬರಮೇಲು, ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಛ, ಗ್ರಾಮ ಪಂಚಾಯತ್ ಸದಸ್ಯರು, ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!