ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವ್ಯಕ್ತಿಗೆ ಕತ್ತಿಯಿಂದ ಇರಿದು ಮಾರಣಾಂತಿಕ ಹಲ್ಲೆ ಸುಬ್ರಹ್ಮಣ್ಯ ಬಳಿ ಮನೆಗೆ ಬಂದಿದ್ದ ಅತಿಥಿಯಿಂದಲೇ ಕೃತ್ಯ

ವ್ಯಕ್ತಿಗೆ ಕತ್ತಿಯಿಂದ ಇರಿದು ಮಾರಣಾಂತಿಕ ಹಲ್ಲೆ ಸುಬ್ರಹ್ಮಣ್ಯ ಬಳಿ ಮನೆಗೆ ಬಂದಿದ್ದ ಅತಿಥಿಯಿಂದಲೇ ಕೃತ್ಯ

 

 

ಸುಬ್ರಮಣ್ಯ: ಅತಿಥಿಯಾಗಿ ವ್ಯಕ್ತಿಯೊಬ್ಬರ ಮನೆಗೆ ಬಂದಿದ್ದಾತ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಕತ್ತಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜು 02 ರಂದು  ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದ ತೋಟದ ಮಜಲು‌ ಎಂಬಲ್ಲಿ  ನಡೆದಿದೆ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ತೋಟದ ಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ. ಕೇರಳ ಮೂಲದ ಲೂಕೋಸ್, ಕಳೆದ ಎಂಟು ವರ್ಷಗಳ ಹಿಂದೆ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ಜಾಗ ಖರೀದಿಸಿ ಸಂಸಾರ ಸಮೇತರಾಗಿ ವಾಸವಾಗಿದ್ದರು. ಆದರೆ, ಕಳೆದ ಎರಡು ವರ್ಷದ ಹಿಂದೆ ಪತ್ನಿ ಬಿಟ್ಟು ಹೋಗಿದ್ದು, ನಂತರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಿದ್ದರು. ವಾರದ ಹಿಂದೆ ಲೂಕೋಸ್ ಅವರ ಮನೆಗೆ ಅತಿಥಿಯೊಬ್ಬ ಬಂದಿದ್ದು, ಇವರ ಮನೆಯಲ್ಲೇ ವಾಸವಾಗಿದ್ದ.‌ ನಿನ್ನೆ ಮುಂಜಾನೆ ವೇಳೆ ಇಬ್ಬರೂ ಗುತ್ತಿಗಾರಿಗೆ ತೆರಳಿದ್ದು, ಬಳಿಕ ಮನೆಗೆ ವಾಪಸ್​ ಆಗಿದ್ದರು.ನಿನ್ನೆ ಮಧ್ಯಾಹ್ನ  ಸುಮಾರು 4 ಗಂಟೆಯ ವೇಳೆಗೆ ಅತಿಥಿಯಾಗಿ ಮನೆಗೆ ಬಂದಿದ್ದಾತ ರಬ್ಬರ್ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಲೂಕೋಸ್​ಗೆ ನಾಲ್ಕೈದು ಬಾರಿ ಇರಿದು ಬಳಿಕ ಪರಾರಿಯಾಗಿದ್ದಾನೆ‌. ಗಾಯಗೊಂಡ ಲೂಕೋಸ್ ಪಕ್ಕದ ಮನೆಗೆ ಓಡಿಹೋಗಿದ್ದು, ಅಲ್ಲಿ ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ. ಬಳಿಕ ಸ್ಥಳೀಯರು ಸುಬ್ರಮಣ್ಯ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು

ಸುಬ್ರಹ್ಮಣ್ಯ ಠಾಣಾಧಿಕಾರಿ ಜಂಬುರಾಜ್ ಮಹಾಜನ್ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುವನ್ನು ಸುಳ್ಯದ ಕೆ. ವಿ.ಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!