ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿದ್ಯಾರ್ಥಿಯ ಬಲಿ ಪಡೆದ ಅಪಘಾತ, ಇಬ್ಬರಿಗೆ ಗಂಭೀರ ಗಾಯ: ಪುಂಜಾಲಕಟ್ಟೆಯಲ್ಲಿ ಬೈಕ್ ಗಳ ಮುಖಾಮುಖಿ ಡಿಕ್ಕಿ, ಮಂಗಳೂರಿಗನ ಕಾಲೇಜಿಗೆ ತೆರಳುತ್ತಿದ್ದ ವೇಳೆ ಘಟನೆ:

ವಿದ್ಯಾರ್ಥಿಯ ಬಲಿ ಪಡೆದ ಅಪಘಾತ, ಇಬ್ಬರಿಗೆ ಗಂಭೀರ ಗಾಯ: ಪುಂಜಾಲಕಟ್ಟೆಯಲ್ಲಿ ಬೈಕ್ ಗಳ ಮುಖಾಮುಖಿ ಡಿಕ್ಕಿ, ಮಂಗಳೂರಿಗನ ಕಾಲೇಜಿಗೆ ತೆರಳುತ್ತಿದ್ದ ವೇಳೆ ಘಟನೆ:

 

 

 

 

 

ಪುಂಜಾಲಕಟ್ಟೆ:  ಬೈಕ್ ಗಳ ಮಧ್ಯೆ ಅಪಘಾತ ನಡೆದು  ಬೈಕ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ  ಸಾವನ್ನಪ್ಪಿದ್ದು, ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪುಂಜಾಲಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಮೇಲಿನ ಪೇಟೆ ಶಾರದಾ ಮಂಟಪದ ಬಳಿ ಬೈಕ್ ಗಳ ನಡುವೆ ಇಂದು ಬೆಳಗ್ಗೆ ಡಿಕ್ಕಿ ಹೊಡೆದಿದ್ದು ಇದರಲ್ಲಿ ಒಂದು ಬೈಕ್ ನಲ್ಲಿ ಮಂಗಳೂರು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಂದು ಬೈಕ್ ನಲ್ಲಿದ್ದ ಮಡಂತ್ಯಾರ್ ತರಕಾರಿ ಅಂಗಡಿಯ ಕೆಲಸಗಾರರಿಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾವನ್ನಪ್ಪಿದ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮಂಗಳೂರು ಸೈಂಟ್ ಅಲೋಷಿಯಸ್ ಕಾಲೇಜಿನ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿರುವ ಬಿಬಿಎ ವಿದ್ಯಾರ್ಥಿ ಮಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ‌. ಇನ್ನೊಂದು ಬೈಕ್ ನಲ್ಲಿದ್ದವರು ಮಂಡತ್ಯಾರಿನ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುವವರ ಎನ್ನಲಾಗಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!