ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೃದಯಾಘಾತ ಪಿಯುಸಿ ವಿದ್ಯಾರ್ಥಿ ಸಾವು: ನೆರಿಯ ಗ್ರಾಮದಲ್ಲಿ ನಡೆದ ಘಟನೆ:

ಹೃದಯಾಘಾತ ಪಿಯುಸಿ ವಿದ್ಯಾರ್ಥಿ ಸಾವು: ನೆರಿಯ ಗ್ರಾಮದಲ್ಲಿ ನಡೆದ ಘಟನೆ:

 

ಬೆಳ್ತಂಗಡಿ :ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿ ನಡೆದಿದೆ. ಸಚಿನ್ (17) ಮೃತ ದುರ್ದೈವಿ.

ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ.

ಇಂದು ಕಾಲೇಜಿಗೆ ರಜೆ ಇದ್ದರಿಂದ ಆತ ಮನೆಯಲ್ಲಿದ್ದ. ಈ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಸಚಿನ್ ತಂದೆ,ತಾಯಿ, ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!