ತಾಲೂಕಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 10 ಕೋಟಿ ರೂ. ಹೆಚ್ಚಿನ ಅನುದಾನ ನೀಡಲಾಗುವುದು. ತಾಲೂಕಿನ 48 ಪಂಚಾಯಿತಿಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಮನೆ ಬೇಕಾಗಿರುವ ಫಲಾನುಭವಿಗಳನ್ನು ತಕ್ಷಣ ಗುರುತಿಸಿ ವರದಿ ನೀಡಬೇಕು. ಕೂಡಲೆ ಮನೆಗಳನ್ನು ಒದಗಿಸುವ ಕೆಲಸ ಮಾಡಲಾಗುವುದು. ಬಸವ ವಸತಿ ಯೋಜನೆಯೆಲ್ಲಿ ರೂ 1500 ಕೋಟಿ ಅನುದಾನ ಇದೆ.ಜನರಿಗೆ ಯೋಜನೆಗಳು ಸಮರ್ಪಕವಾಗಿ ತಲುಪಲು ದಕ ಜಿಲ್ಲೆಯಲ್ಲಿ ಅಧಿಕಾರಿ ವರ್ಗ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಚಿವರು ಹೇಳಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ ಪ್ರತಿಯೊಬ್ಬನಿಗೂ ಮನೆ ಕಟ್ಟುವ ಕನಸು ಇರುತ್ತದೆ. ಆ ಸಂಕಲ್ಪ ಈಡೇರುವ ಕಾಲ ಬಂದಿದೆ.ಸರಕಾರವು ರಾಜ್ಯದ ಪ್ರತಿ ತಾಲೂಕಿಗೆ ಮನೆಗಳನ್ನು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆಯನ್ನು ರೂಪಿಸಿ ಅದನ್ನು ಜನರಿಗೆ ತಲುಪಿಸುತ್ತಿದೆ. ಬೆಳ್ತಂಗಡಿ ತಾಲೂಕಿಗೆ ಇನ್ನೂ 5,000 ಮನೆಗಳ ಅಗತ್ಯವಿದ್ದು ಈ ಬಗ್ಗೆ ಸಚಿವರಲ್ಲಿ ಮನವಿ ಮಾಡಲಾಗಿದೆ. ತಾಲೂಕಿನ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ವಿಷಯದಲ್ಲಿ ಹೆಚ್ಚಿನ ಶಕ್ತಿಯನ್ನು ನೀಡುತ್ತಿರುವುದರಿಂದ ಜನತೆಗೆ ಸೌಲಭ್ಯ ಒದಗಿಸಲು ಅನುಕೂಲವಾಗಿದೆ ಎಂದರು. ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್,ಜಿಪಂ ಸಿಇಒ ಡಾ. ಕುಮಾರ್ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಜನಿ ಕುಡ್ವ ಉಪಾಧ್ಯಕ್ಷ ಜಯಾನಂದ ಗೌಡ,,ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ಅರುಣ್ ಕುಮಾರ್ ತಹಸೀಲ್ದಾರ್ ಪೃಥ್ವಿ ಸಾನಿಕಂ, ವಸತಿ ನಿಗಮದ ಅಧಿಕಾರಿ ಎಚ್. ಆರ್. ನಾಯಕ್ ಹಾಗೂ ತಾಲೂಕಿನ ನಾನಾ ಗ್ರಾಪಂ ಗಳ ಅಧ್ಯಕ್ಷರು ಉಪಸ್ಥಿತರಿದ್ದರು. ಉಜಿರೆ ಗ್ರಾಪಂ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ. ಸ್ವಾಗತಿಸಿದರು.