ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೋಲಿ ರಿಡೀಮರ್ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಹೋಲಿ ರಿಡೀಮರ್ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

 

 

ಬೆಳ್ತಂಗಡಿ:ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆಗಸ್ಟ್ 23ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕರಾದ ಅತಿ ವಂ. ಫಾ. ಜೋಸೆಫ್ ಕಾರ್ಡೋಜರವರು ನೆರವೇರಿಸಿ ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿ ಆಶೀರ್ವದಿಸಿದರು.

 

ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ವಿರೂಪಾಕ್ಷ ರವರು ಶಾಲೆಯ ಸೌಲಭ್ಯಗಳು ಮತ್ತು ಈ ಕಾರ್ಯಕ್ರಮವನ್ನು ಹಮ್ಮಿಕೊಂಡ ರೀತಿಯನ್ನು ಕಂಡು ಮೆಚ್ಚಿ ಶುಭ ಹಾರೈಸಿದರು.

 

 

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ. ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು. ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರದ ಜೊತೆಗೆ ಪುಸ್ತಕವನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀ ಶಂಭು ಶಂಕರ್, ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಕೋಶಾಧಿಕಾರಿ ಶ್ರೀ ಲೋಕೇಶ್,

 

 

 

ಬೆಳ್ತಂಗಡಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀ ಮೋಹನ್ , ಚರ್ಚ್ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೆನ್ನಿ ವಾಸ್, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಬೊನವೆಂಚರ್ ಪಿಂಟೋ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!