ಮಕ್ಕಳಿಗೆ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲಿಯೇ ಇದ್ದರು ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿದ್ದು ಬಳಿಕ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಒರ್ವ ಬಾಲಕ ನಿನ್ನೆ ಮೃತ ಪಟ್ಟಿದ್ದು ಇನ್ನೋರ್ವ ಬಾಲಕ ಮಂಗಳವಾರ ಮೃತಪಟ್ಟಿದ್ದಾನೆ. ಮನೆಯ ಇಬ್ಬರು ಮಕ್ಕಳನ್ನೂ ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.