ಬೆಳ್ತಂಗಡಿ; ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಜೀವಬೆದರಿಕೆ ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೋಲೀಸರು ಬಂಧಿಸಿದ್ದಾರೆ. ಮಂಗಳೂರು ಪಳ್ನೀರು ನಿವಾಸಿ ರಿಯಾಜ್ ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ .ಹೃಷಿಕೇಶ್ ಭಗವಾನ್ ಸೋನಾವಣೆ ಮಾದ್ಯಮಕ್ಕೆ ಮಾಹಿತಿ ನೀಡಿದರು. ಗುರುವಾರ ರಾತ್ರಿ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿ ದ ಬಂಟ್ವಾಳ ಪೋಲೀಸರು ಸ್ಕಾರ್ಫಿಯೋ ವಾಹನ ಸಹಿತ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ಮಾಹಿತಿ ನೀಡಿದ ಅವರು ಆರೋಪಿ ವಿರುದ್ದ ಈ ವರೆಗೆ ಯಾವುದೇ ಕ್ರಿಮಿನಲ್ ಪ್ರಕರಣ ಗಳು ದಾಖಲಾಗಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.