ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿನ‌ ಮೇಲೆ ದುಷ್ಕರ್ಮಿಗಳಿಂದ ದಾಳಿಗೆ ಯತ್ನ: ಕಾರು ಅಡ್ಡಗಟ್ಟಿ ತಲ್ವಾರು ಝಳಪಿಸಿದ ದುಷ್ಕರ್ಮಿಗಳು: ಫರಂಗಿಪೇಟೆ ಬಳಿ ಅವಾಚ್ಯವಾಗಿ ಬೈದು ತಲ್ವಾರ್ ತೋರಿಸಿ ಪರಾರಿ:

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿನ‌ ಮೇಲೆ ದುಷ್ಕರ್ಮಿಗಳಿಂದ ದಾಳಿಗೆ ಯತ್ನ: ಕಾರು ಅಡ್ಡಗಟ್ಟಿ ತಲ್ವಾರು ಝಳಪಿಸಿದ ದುಷ್ಕರ್ಮಿಗಳು: ಫರಂಗಿಪೇಟೆ ಬಳಿ ಅವಾಚ್ಯವಾಗಿ ಬೈದು ತಲ್ವಾರ್ ತೋರಿಸಿ ಪರಾರಿ:

 

 

 

ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿಗೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ, ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರು ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿದ್ದರು. ಆಗ ಪಡೀಲ್​​​ನಿಂದ ಕಾರು ಬೆನ್ನಟ್ಟಿದ್ದ ದುಷ್ಕರ್ಮಿಗಳ ತಂಡ, ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವ್ಯಾಚ್ಯವಾಗಿ ಬೈದು ತಲ್ವಾರ್ ಝಳಪಿಸಿ ಪರಾರಿಯಾಗಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ‌. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!