ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾಂತಾರ ವರಾಹ ರೂಪಂ ಹಾಡಿಗೆ ಪಂಜುರ್ಲಿ ದೈವದ ವೇಷ ಧರಿಸಿ ರೀಲ್ಸ್: ಜನರ ಆಕ್ರೋಶಕ್ಕೆ ಗುರಿಯಾದ ಹೈದರಾಬಾದ್ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ: ಧರ್ಮಸ್ಥಳ ಕ್ಷೇತ್ರಕ್ಕೆ ಬಂದು ಕ್ಷಮೆಯಾಚನೆ

ಕಾಂತಾರ ವರಾಹ ರೂಪಂ ಹಾಡಿಗೆ ಪಂಜುರ್ಲಿ ದೈವದ ವೇಷ ಧರಿಸಿ ರೀಲ್ಸ್: ಜನರ ಆಕ್ರೋಶಕ್ಕೆ ಗುರಿಯಾದ ಹೈದರಾಬಾದ್ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ: ಧರ್ಮಸ್ಥಳ ಕ್ಷೇತ್ರಕ್ಕೆ ಬಂದು ಕ್ಷಮೆಯಾಚನೆ

ಧರ್ಮಸ್ಥಳ : ಕಾಂತಾರ ಸಿನಿಮಾ ರೀತಿಯಲ್ಲಿ 'ಪಂಜುರ್ಲಿ' ದೈವದ ವೇಷ ಧರಿಸಿ ರೀಲ್ಸ್ ಮಾಡಿ ತುಳುನಾಡಿದ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಧರ್ಮಸ್ಥಳ ಕ್ಷೇತ್ರಕ್ಕೆ ಬಂದು ಕ್ಷಮೆ ಯಾಚಿಸಿದ್ದಾಳೆ.

'ವರಹಾ ರೂಪಂ' ಹಾಡಿಗೆ ರೀಲ್ಸ್ ಮಾಡಲು ಯುವತಿ ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿ, ವೇಷ ಧರಿಸಿದ್ದಾಳೆ. ಬಳಿಕ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾಳೆ. ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದ್ದಂತೆ ಅನೇಕರು ಯುವತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು, ಅದರಲ್ಲಿಯೂ ಕೆಲವರು 'ಈಕೆಯನ್ನು ಧರ್ಮಸ್ಥಳ ಮಂಜುನಾಥನೇ ನೋಡಿಕೊಳ್ಳಲಿ' ಎಂದು ಹೇಳಿದ್ದರು.

ಜನ ಆಕ್ರೋಶಗೊಂಡಿದ್ದರಿಂದ ಯುವತಿ ತಕ್ಷಣ ತನ್ನ ರೀಲ್ಸ್ ನ್ನು ಡಿಲೀಟ್ ಮಾಡಿ ಮಂಜುನಾಥ ಸ್ವಾಮಿಗೆ ಕ್ಷಮೆ ಕೇಳುವುದಾಗಿ ಹೇಳಿದ್ದಾಳೆ. ಹೀಗಾಗಿ ಇಂದು ಯುವತಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ ಬಳಿಕ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನ ಭೇಟಿಯಾಗಿ ಕ್ಷಮೆ ಯಾಚಿಸಿದ್ದಾಳೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!