ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿವೃತ್ತ ಯೋಧ ಶಿಸ್ತಿನ ಸಿಪಾಯಿ: ಎಂ.ಆರ್ ಜೈನ್ ನಿಧನ:

ನಿವೃತ್ತ ಯೋಧ ಶಿಸ್ತಿನ ಸಿಪಾಯಿ: ಎಂ.ಆರ್ ಜೈನ್ ನಿಧನ:

 

 

 

 

ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಜೈನಪೇಟೆಯ ನಿವಾಸಿ ನಿವೃತ್ತ ಯೋಧ, ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐ.ಟಿ.ಐಯ ನೇಮಕಾತಿ ಅಧಿಕಾರಿ ಎಂ.ಆರ್ ಜೈನ್ (77ವ) ಅವರು ಹೃದಯಾಘಾತದಿಂದ ನ.12 ರಂದು ನಿಧನಹೊಂದಿದ್ದಾರೆ.

ಇವರು 1986ರಲ್ಲಿ ಸ್ಥಾಪನೆಯಾದ ವೇಣೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕ ತರಬೇತಿ ಸಂಸ್ಥೆಯ ಸ್ಥಾಪಕ ಪ್ರಾಚಾರ್ಯರಾಗಿ, ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು. ನಿವೃತ್ತಿಯ ಬಳಿಕ ಇದುವರೆಗೂ ಸಂಸ್ಥೆಯ ನೇಮಕಾತಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಶಿಸ್ತಿನ ಸಿಪಾಯಿ ಎಂದೇ ಖ್ಯಾತರಾಗಿದ್ದ ಎಂ.ಆರ್.ಜೈನ್ ಸೇನೆಯಿಂದ ನಿವೃತ್ತಿಯ ಬಳಿಕ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯುತ್ತಿರುವ ಸ್ವಾತಂತ್ರೋತ್ಸವ, ಕನ್ನಡ ರಾಜೋತ್ಸವ, ಗಣರಾಜೋತ್ಸವ ಸೇರಿದಂತೆ ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸಿ, ಪಥಸಂಚಲನಕ್ಕೆ ಮಾರ್ಗದರ್ಶನ ನೀಡುತ್ತಿದ್ದರು. ಮೃತರು ಪತ್ನಿ, ಒಂದು ಗಂಡು, ಮೂರು ಹೆಣ್ಣು ಮಕ್ಕಳನ್ನು ಬಂಧು, ವರ್ಗದವರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!