ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಯಾತ್ರಾರ್ಥಿಗಳ ಟೆಂಪೋ ಚರಂಡಿಗೆ ಬಿದ್ದು ಹಲವರಿಗೆ ಗಾಯ: ಕೊಕ್ಕಡ ಬಳಿ ನಡೆದ ಘಟನೆ: ಅಪಾಯದಿಂದ ಪಾರಾದ ಪ್ರಯಾಣಿಕರು:

ಯಾತ್ರಾರ್ಥಿಗಳ ಟೆಂಪೋ ಚರಂಡಿಗೆ ಬಿದ್ದು ಹಲವರಿಗೆ ಗಾಯ: ಕೊಕ್ಕಡ ಬಳಿ ನಡೆದ ಘಟನೆ: ಅಪಾಯದಿಂದ ಪಾರಾದ ಪ್ರಯಾಣಿಕರು:

 

 

ಬೆಳ್ತಂಗಡಿ: ಟೆಂಪೋವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವರಿಗೆ ಗಾಯಗಳಾದ ಘಟನೆ ಕೊಕ್ಕಡ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ದೇವರ ದರುಶನ ಪಡೆದು  ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ಚರಂಡಿಗೆ ಬಿದ್ದಿದೆ. ಈ ಸಂದರ್ಭ ವಾಹನದಲ್ಲಿದ್ದ ಸುಮಾರು 8 ಮಂದಿಗೆ ಗಾಯಗಳಾಗಿದ್ದು ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಕೊಕ್ಕಡದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ .ಅಲ್ಲಿಂದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು  ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!