ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ; ಬೈಕ್ ಸ್ಕಿಡ್ : ಸವಾರ ಸಾವು..! ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವಿನಲ್ಲಿ ಘಟನೆ

ಬೆಳ್ತಂಗಡಿ; ಬೈಕ್ ಸ್ಕಿಡ್ : ಸವಾರ ಸಾವು..! ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವಿನಲ್ಲಿ ಘಟನೆ

ಬೆಳ್ತಂಗಡಿ : ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಸವಾರನೊಬ್ಬ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಅಣಿಯೂರಿನ ನೋಣಯ್ಯ ಗೌಡ ಎಂಬವರ ಪುತ್ರ ಪ್ರದೀಪ ಗೌಡ (22) ಮೃತ ದುರ್ದೈವಿ.

ನಿನ್ನೆ ರಾತ್ರಿ ಸಂಬಂಧಗಳ ಮನೆಯಲ್ಲಿ ಶುಭ ಕಾರ್ಯ ಇದ್ದ ಕಾರಣ ಆ ಮನೆಗೆ ವಸ್ತುವೊಂದನ್ನು ನೀಡಲು ಅತ್ತ ತೆರಳುತ್ತಿದ್ದರು . ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಅಲ್ಲೆ ಮನೆಯ ಗೇಟಿನ ಬಳಿ ಇದ್ದ ಕಲ್ಲಿನ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ಆದ ತಕ್ಷಣ ಸ್ಥಳೀಯರು ಅವರನ್ನು ಉಜಿರೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಸಾಗಿಸುವ ವೇಳೆ ಪ್ರದೀಪ ಅವರು ದಾರಿ ಮಧ್ಯೆ ಉಸಿರು ಚೆಲ್ಲಿದ್ದಾರೆ.

ಅಪಘಾತವಾದ ರಸ್ತೆಯು ಅತ್ಯಂತ ಅಪಾಯಕಾರಿ ವಲಯವಾಗಿದ್ದು ಈ ಹಿಂದೆಯೂ ಇಲ್ಲಿ ಅನೇಕ ಬಾರಿ ಅಪಘಾತ ನಡೆದಿದ್ದು, ಪ್ರಾಣ ಹಾನಿಯೂ ಸಂಭವಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!