ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ ಗ್ರಾ.ಪಂ ವತಿಯಿಂದ ವಿಶ್ವ ವಿಶೇಷ ಚೇತನರ ದಿನಾಚರಣೆ: 30 ವಿಶೇಷ ಚೇತನರಿಗೆ UDID ಕಾರ್ಡ್ ಪ್ರತಿ ವಿತರಣೆ

ಉಜಿರೆ ಗ್ರಾ.ಪಂ ವತಿಯಿಂದ ವಿಶ್ವ ವಿಶೇಷ ಚೇತನರ ದಿನಾಚರಣೆ: 30 ವಿಶೇಷ ಚೇತನರಿಗೆ UDID ಕಾರ್ಡ್ ಪ್ರತಿ ವಿತರಣೆ

ಉಜಿರೆ: ವಿಶ್ವ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ಡಿ. 22 ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ನಡೆಯಿತು.

ಪಂಚಾಯತ್ ಅಧ್ಯಕ್ಷರಾದ ಪುಷ್ಪಾವತಿ ಆರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಉಜಿರೆ ಗ್ರಾಮದ ವಿಶೇಷ ಚೇತನರಾದ ಕುಮಾರಿ ಶಮಾ ಇವರಿಗೆ ಪಂಚಾಯತ್ ವತಿಯಿಂದ ಸ್ಟಡಿ ಟೇಬಲ್ ಹಾಗೂ 30 ವಿಶೇಷ ಚೇತನರಿಗೆ UDID ಕಾರ್ಡ್ ಪ್ರತಿಯನ್ನು ವಿತರಿಸಲಾಯಿತು . ಈ ಸಭೆಯಲ್ಲಿ 80 ಜನ ವಿಶೇಷ ಚೇತನರು ಹಾಜರಿದ್ದು ಸಮನ್ವಯ ಗ್ರಾಮ ಸಭೆಯನ್ನು ಯಶಸ್ವಿಗೊಳಿಸಿದರು.

ಈ ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲು, ಪಂಚಾಯತ್ ಸದಸ್ಯರು, ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್, ತಾಲೂಕು ಪಂಚಾಯತ್ ವಿಶೇಷ ಚೇತನರ ವಿವಿಧೋದ್ದೇಶ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ , ವಿ.ಅರ್.ಡಬ್ಲ್ಯೂ. ವಿಪುಲ್, ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ಸೀತಾ ಆರ್ ಶೆಟ್, ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಲ್ಲಿಕಾ, ಅಂಗನವಾಡಿ ಕಾರ್ಯ ಕರ್ತೆ ಯರು ಹಾಗೂ ಆಶಾ ಕಾರ್ಯಕರ್ತೆಯರು, ರಾಷ್ಟ್ರ ಪ್ರಶಸ್ತಿ ವಿಜೇತೆಯಾರಾದ ಅಂಜನಾ ದೇವಿ, ಚಂದ್ರಕಲಾ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!