ಈ ಸಂದರ್ಭ ಮಾತನಾಡಿ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿ, ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಇದೇ ವೇಳೆ ಮಂಗಳೂರಿನಲ್ಲಿ ನಡೆದ ಪತ್ರಕರ್ತರ ಸಮ್ಮೇಳನ ಸಾನಿಧ್ಯ ವಹಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಸಂದರ್ಭವನ್ನು ನೆನಪಿಸಿ ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಖಜಾಂಚಿ ಬಿ.ಎನ್.ಪುಷ್ಪರಾಜ್ , ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ , ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್ , ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಚ್ತೈತ್ರೇಶ್ ಇಳಂತಿಲ ಉಪಸ್ಥಿತರಿದ್ದರು.