ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಕ್ರಮ ಮರಳುಗಾರಿಕೆ ಜಿಲ್ಲೆಯ ಹಲವೆಡೆ ಲೋಕಾಯುಕ್ತ ದಾಳಿ: ಲಾರಿ ದೋಣಿ ಸೇರಿದಂತೆ 40 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ ಅಕ್ರಮ ಗಣಿಗಾರಿಕೆ ಮೇಲೂ ಖಾಕಿ ಕಣ್ಣು..!

ಅಕ್ರಮ ಮರಳುಗಾರಿಕೆ ಜಿಲ್ಲೆಯ ಹಲವೆಡೆ ಲೋಕಾಯುಕ್ತ ದಾಳಿ: ಲಾರಿ ದೋಣಿ ಸೇರಿದಂತೆ 40 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ ಅಕ್ರಮ ಗಣಿಗಾರಿಕೆ ಮೇಲೂ ಖಾಕಿ ಕಣ್ಣು..!

 

 

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರುಳುಗಾರಿಕೆ ಮೇಲೆ ನಿನ್ನೆ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದೆ. ಬೆಳ್ತಂಗಡಿ, ಬಂಟ್ವಾಳ, ಮೂಡಬಿದಿರೆಯ  ಮರುಳುಗಾರಿಕೆ ಮೇಲೆ ದಾಳಿ‌ಮಾಡಿದ ಪೊಲೀಸರು ಟಿಪ್ಪರ್, ದೋಣಿ ಸೇರಿದಂತೆ ಸುಮಾರು 40 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.

ಅಕ್ರಮ ಮರಳುಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದ್ದು, ಅಕ್ರಮ ಮರಳುಗಾರಿಕೆ ಬಗ್ಗೆ ತಿಳಿದು ಸುಮ್ಮನಿರುವ ಅಧಿಕಾರಿಗಳ‌ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

 

 

 

 

ಅಕ್ರಮ ಗಣಿಗಾರಿಕೆ ಹಾಗೂ ಮಿತಿಮೀರಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆಯೂ ಎಚ್ಚರ ವಹಿಸಿರುವ ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!