ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಚಳಿ ಬಿಡಿಸಲು ಮುಂದಾದ ಗ್ರಾಮ ಪಂಚಾಯತ್ ನೌಕರರು..!: 8 ವರ್ಷದ ಮನವಿಯನ್ನು ಕೇಳದ ಸರ್ಕಾರದ ಕಿವಿ ಹಿಂಡಲು ನೌಕರರ ಸಿದ್ಧತೆ..!: ಬಹುತೇಕ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯಚಟುವಟಿಕೆಗಳು ಸ್ಥಗಿತ..!?

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಚಳಿ ಬಿಡಿಸಲು ಮುಂದಾದ ಗ್ರಾಮ ಪಂಚಾಯತ್ ನೌಕರರು..!: 8 ವರ್ಷದ ಮನವಿಯನ್ನು ಕೇಳದ ಸರ್ಕಾರದ ಕಿವಿ ಹಿಂಡಲು ನೌಕರರ ಸಿದ್ಧತೆ..!: ಬಹುತೇಕ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯಚಟುವಟಿಕೆಗಳು ಸ್ಥಗಿತ..!?

ಬೆಳ್ತಂಗಡಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ 19ರಿಂದ ಅನಿರ್ಧಿಷ್ಟಾವಧಿ ತನಕ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್‌ಡಿಪಿಐಆರ್ ರಾಜ್ಯ ಸಮಿತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಲಿದೆ. ಬೆಳಗಾವಿ ಸುವರ್ಣ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಯಲಿದ್ದು ಸರ್ಕಾರದ ಕಿವಿ ಹಿಂಡಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ.

ಸಿ ಮತ್ತು ಡಿ ದರ್ಜೆ ಸ್ಥಾನಮಾನ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಗ್ರಾಮ ಪಂಚಾಯತ್ ನೌಕರರು ಕಳೆದ 8 ವರ್ಷಗಳಿಂದ ಮುಖ್ಯಮಂತ್ರಿ, ಸಚಿವರು ಹಾಗೂ ಸರಕಾರದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡುತ್ತಲೇ ಬರುತ್ತಿದ್ದಾರೆ. ಆದರೂ ಸರಕಾರದಿಂದ ಈ ತನಕ ಗ್ರಾಮ ಪಂಚಾಯತ್ ನೌಕರರ ಬೇಡಿಕೆಗಳಿಗೆ ಯಾವುದೇ ರೀತಿಯ ಸ್ಪಂದನೆ ದೊರೆತಿಲ್ಲ. ಹೀಗಾಗಿ ಡಿ.19ರಿಂದ 30ರ ತನಕ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸರಕಾರದ ಚಳಿ ಬಿಡಿಸಲು ನೌಕರರು ಮುಂದಾಗಿದ್ದಾರೆ.

ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್/ಕ್ಲರ್ಕ್ ಕಮ್ ಡಿಇಓ, ಬಿಲ್ ಕಲೆಕ್ಟರ್ ಹಾಗೂ ಡಾಟ ಎಂಟ್ರೀ ಅಪರೇಟರ್‌ಗಳಿಗೆ ಸಿ ದರ್ಜೆ ಸ್ಥಾನಮಾನ ಮತ್ತು ಅಟೆಂಡರ್, ಕ್ಲೀನರ್, ವಾಟರ್ ಮ್ಯಾನ್/ಪಂಪು ಚಾಲಕ ಇತ್ಯಾದಿ ವೃಂದದವರಿಗೆ ಡಿ ದರ್ಜೆ ಸ್ಥಾನಮಾನ ನೀಡಬೇಕು, ನಗರ ಮತ್ತು ಪಟ್ಟಣ ಪಂಚಾಯತ್‌ನAತೆ ಸೇವಾನಿಯಮಾವಳಿ, ವೇತನ ಶ್ರೇಣಿ ನಿಗದಿಪಡಿಸಬೇಕು, ಸರ್ಕಾರದ ಆದೇಶ ದಿನಾಂಕ: 29-09-2020ರ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್ ನೌಕರರಿಗೆ ಅವರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಪರಿಗಣಿಸದೇ ಹಾಗೂ ಪಂಚಾಯತ್‌ಗಳಲ್ಲಿ ಹುದ್ದೆಗಳ ಗರಿಷ್ಠ ಮಿತಿಯನ್ನು ನಿಗದಿಪಡಿಸದೆ ಜಿಲ್ಲಾ ಪಂಚಾಯತ್‌ನಿಂದ ಅನುಮೋದನೆ ನೀಡಬೇಕು, ಗ್ರಾಮ ಪಂಚಾಯತ್ ನೌಕರರು ಮತ್ತು ನೌಕರರ ಅವಲಂಬಿತರಿಗೆ ಆರೋಗ್ಯ ಭದ್ರತೆಯೊಂದಿಗೆ ನಿವೃತ್ತಿ ಜೀವನಕ್ಕೆ ಭವಿಷ್ಯ ನಿಧಿ/ಪಿಂಚಣಿ ವ್ಯವಸ್ಥೆಯನ್ನು ಕಲ್ಪಿಸಬೇಕು, ವಿದ್ಯಾರ್ಹತೆ ಮತ್ತು ವಯೋಮಿತಿ ಹಾಗೂ ಇತರೆ ಸಮಸ್ಯೆಗಳಿಂದ ಜಿಲ್ಲಾ ಪಂಚಾಯತ್ ಅನುಮೋದನೆಯಾಗದೇ ನಿವೃತ್ತಿಯಾದ ಹಾಗೂ ಮುಂದೆ ನಿವೃತ್ತಿಯಾಗುವ ಎಲ್ಲಾ ಗ್ರಾಮ ಪಂಚಾಯತ್ ನೌಕರರಿಗೆ ನಿವೃತ್ತಿ ಉಪಧನ ಮಂಜೂರು ಮಾಡಬೇಕು, ಸದ್ರಿ ನಿವೃತ್ತಿ ಉಪಧನ ಪಾವತಿಸಲು ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಸರಕಾರವೇ ಒಂದು ಶಾಶ್ವತ ನಿಧಿಯನ್ನು ಕಾಯ್ದಿರಿಸಬೇಕು, ಎಂಬಿತ್ಯಾದಿ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಿದೆ.

ಬೆಳಗಾವಿಯಲ್ಲಿ ನಡೆಯುವ ಹೋರಾಟದಲ್ಲಿ ರಾಜ್ಯದ 5600ಕ್ಕೂ ಮಿಕ್ಕಿದ ಗ್ರಾಮ ಪಂಚಾಯತ್‌ಗಳ ನೌಕರರೂ ಪಾಲ್ಗೊಳ್ಳುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗ್ರಾಮ ಪಂಚಾಯತ್‌ಗಳ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ನೌಕರರು ಸಾಮೂಹಿಕವಾಗಿ ರಜೆ ಪಡೆದುಕೊಂಡಿರುವುದರಿಂದ ಗ್ರಾಮ ಪಂಚಾಯಿತಿ ಕೆಲಸಗಳು ಸ್ಥಬ್ಧಗೊಳ್ಳಲಿದೆ.

ಈ ಮಧ್ಯೆ ಡಿ.19ರಿಂದ ರ‍್ನಾಟಕ ರಾಜ್ಯ ರ‍್ಕಾರಿ ಎನ್.ಪಿ.ಎಸ್.ನೌಕರರ ಸಂಘವೂ ನಿಶ್ಚಿತ ಪಿಂಚಣಿಗಾಗಿ ಬೆಂಗಳೂರಿನ ಫ್ರೀಡಂ ರ‍್ಕ್ನಲ್ಲಿ ’ಮಾಡು ಇಲ್ಲವೇ ಮಡಿ’ ಹೋರಾಟಕ್ಕೆ ಕರೆ ಕೊಟ್ಟಿದ್ದು ಇದರಲ್ಲಿ ಗ್ರಾಮ ಪಂಚಾಯತ್‌ಗಳ ಬಹುತೇಕ ಪಿಡಿಒಗಳೂ ಭಾಗಿಯಾಗುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!